ತಮಿಳುನಾಡು ರೈತರ ಪ್ರತಿಭಟನೆ 
ದೇಶ

ಕಾವೇರಿ ವಿವಾದ: ತಮಿಳುನಾಡಿನಲ್ಲೂ ಮುಂದುವರೆದ ರೈತರ ಪ್ರತಿಭಟನೆ!

ತಮಿಳುನಾಡಿನಲ್ಲಿಯೂ ಕಾವೇರಿ ಹೋರಾಟ ತೀವ್ರಗೊಂಡಿದೆ. ತಮ್ಮ ರಾಜ್ಯಕ್ಕೆ ನದಿ ನೀರು ಬಿಡುವಂತೆ ಒತ್ತಾಯಿಸಿ ತಿರುಚ್ಚಿಯ ರೈತರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕರ್ನಾಟಕವನ್ನು ಒತ್ತಾಯಿಸಿದರು.

ತಿರುಚಿ: ತಮಿಳುನಾಡಿನಲ್ಲಿಯೂ ಕಾವೇರಿ ಹೋರಾಟ ತೀವ್ರಗೊಂಡಿದೆ. ತಮ್ಮ ರಾಜ್ಯಕ್ಕೆ ನದಿ ನೀರು ಬಿಡುವಂತೆ ಒತ್ತಾಯಿಸಿ ತಿರುಚ್ಚಿಯ ರೈತರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕರ್ನಾಟಕವನ್ನು ಒತ್ತಾಯಿಸಿದರು.

ಮಾನವನ ಆಸ್ಥಿ ಪಂಜರ, ತಲೆಬುರುಡೆ ಇಟ್ಟುಕೊಂಡು ಅರೆಬೆತ್ತಲು ಪ್ರತಿಭಟನೆ ನಡೆಸಿದ ರೈತರು, ಕರ್ನಾಟಕ ಸದ್ಯ ಹರಿಸುತ್ತಿರುವ ಕಾವೇರಿ ನೀರು ನಮ್ಮ ಬೆಳೆಗೆ ಸಾಕಾಗುತ್ತಿಲ್ಲ. ಇನ್ನೂ ಹೆಚ್ಚಿನ ನೀರು ಹರಿಸಬೇಕೆಂದು ಆಗ್ರಹಿಸಿದರು.

 
ಈ ಮಧ್ಯೆ ನೆರೆಯ ರಾಜ್ಯಕ್ಕೆ ಕಳುಹಿಸುವಷ್ಟು ನೀರಿಲ್ಲ ಎಂಬುದು ಕರ್ನಾಟಕ ಸರ್ಕಾರದ ವಾದವಾದರೂ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಾಜತಾಂತ್ರಿಕವಾಗಿ ಸಮಸ್ಯೆ ನಿಭಾಯಿಸಲು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿಎಂಕೆ ಹೇಳಿದೆ.

ಕಾವೇರಿ ನೀರಿನ ಕೊರತೆಯಿದೆ ಎಂಬುದು ಕರ್ನಾಟಕದ ವಾದವಾಗಿದ್ದರೂ ತಮಿಳುನಾಡು ರೈತರು ಸಂಪೂರ್ಣವಾಗಿ ಕೃಷಿಯ ಮೇಲೆ ಅವಲಂಬಿತವಾಗಿರುವುದು ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಸರ್ಕಾರ ಕಾನೂನು ಪ್ರಕ್ರಿಯೆ, ಕೇಂದ್ರ ಸರ್ಕಾರ ಮತ್ತು ಜಲಶಕ್ತಿ ಸಚಿವರ ಬೆಂಬಲ ಕೋರುವುದರ ಜೊತೆಗೆ ಈ ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲು  ಪ್ರಯತ್ನಿಸುತ್ತಿದೆ ಎಂದು ಡಿಎಂಕೆ ಸಂಸದ ತಿರುಚಿ ಶಿವಾ ಹೇಳಿದ್ದಾರೆ. 

ಸಿಎಂ ಸ್ಟಾಲಿನ್ ರಾಜತಾಂತ್ರಿಕವಾಗಿ ಸಮಸ್ಯೆಯನ್ನು ನಿಭಾಯಿಸುತ್ತಿದ್ದಾರೆ. ತಮಿಳುನಾಡಿಗೆ ಬಾಕಿ ಹರಿಸಬೇಕಾದ ನೀರನ್ನು ಕರ್ನಾಟಕ ಬಿಡುಗಡೆ ಮಾಡಲಿದೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT