ಸಾಂದರ್ಭಿಕ ಚಿತ್ರ 
ದೇಶ

ಲಕ್ನೋ: ಬಿಜೆಪಿ ಶಾಸಕ ಯೋಗೇಶ್ ಶುಕ್ಲಾ ಅಧಿಕೃತ ನಿವಾಸದಲ್ಲಿ ಯುವಕ ನೇಣಿಗೆ ಶರಣು

ಬಿಜೆಪಿ ಶಾಸಕರ ಮನೆಯಲ್ಲೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಲಕ್ನೋ: ಬಿಜೆಪಿ ಶಾಸಕರ ಮನೆಯಲ್ಲೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಶ್ರೇಷ್ಠ ತಿವಾರಿ (30) ಮೃತ ಯುವಕ. ಲಖನೌದ ಹಜರತ್​ಗಂಜ್​ ಏರಿಯಾದಲ್ಲಿ ಇರುವ ಬಿಜೆಪಿ ಶಾಸಕ ಯೇಗೇಶ್​ ಶುಕ್ಲ ಅವರ ಸರ್ಕಾರಿ ನಿವಾಸದಲ್ಲಿ ತಿವಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ತಿವಾರಿ ಬಾರಾಬಂಕಿ ಜಿಲ್ಲೆಯ ಹೈದರ್​ಗಢ ಏರಿಯಾದ ನಿವಾಸಿ.

ಭಾನುವಾರ ರಾತ್ರಿ ಘಟನೆ ನಡೆದಿದ್ದು, ಯಾವುದೇ ದೂರು ದಾಖಲಾಗಿಲ್ಲ ಎಂದು ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಅರವಿಂದ್ ಕುಮಾರ್ ವರ್ಮಾ ತಿಳಿಸಿದ್ದಾರೆ. ಅಲ್ಲದೆ, ಆತ್ಮಹತ್ಯೆಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ ಎಂದು ಅವರು ಹೇಳಿದರು.

ಮೃತರನ್ನು ಶಾಸಕರ ಮಾಧ್ಯಮ ತಂಡದ ಸದಸ್ಯರಾದ ಶ್ರೇಷ್ಠ ತಿವಾರಿ ಎಂದು ಗುರುತಿಸಲಾಗಿದ್ದು, ಅವರು ಬಾರಾಬಂಕಿ ಜಿಲ್ಲೆಗೆ ಸೇರಿದವರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಕೌಟುಂಬಿಕ ಕಲಹದಿಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ, ತಿವಾರಿ ಸಾವಿಗೆ ನಿಖರ ಕಾರಣ ಏನೆಂದು ಖಚಿತಪಡಿಸಿಕೊಳ್ಳಲು ಹೆಚ್ಚಿನ ವಿಚಾರಣೆ ನಡೆಯುತ್ತಿದೆ. ಸದ್ಯ ಶ್ರೇಷ್ಠ ತಿವಾರಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!