ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಮೋದಿ ಸಾಕ್ಷ್ಯಚಿತ್ರ ವಿವಾದ: ಬಿಬಿಸಿಗೆ ಮತ್ತೇ ನೋಟಿಸ್ ನೀಡಿದ ದೆಹಲಿ ಹೈಕೋರ್ಟ್

'ಇಂಡಿಯಾ: ದಿ ಮೋದಿ ಕ್ವೆಶ್ಚನ್' ಸಾಕ್ಷ್ಯಚಿತ್ರದ ಕುರಿತು ಗುಜರಾತ್ ಮೂಲದ ಎನ್‌ಜಿಒ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಸಂಬಂಧ ದೆಹಲಿ ಹೈಕೋರ್ಟ್ ಇಂದು ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್(ಬಿಬಿಸಿ)ಗೆ ಹೊಸ ನೋಟಿಸ್ ಜಾರಿ ಮಾಡಿದೆ.

ಪ್ರಧಾನಿ ಮೋದಿ
Vishwanath S
Updated On : 25 Sept 2023, 9:32 pm

ನವದೆಹಲಿ: 'ಇಂಡಿಯಾ: ದಿ ಮೋದಿ ಕ್ವೆಶ್ಚನ್' ಸಾಕ್ಷ್ಯಚಿತ್ರದ ಕುರಿತು ಗುಜರಾತ್ ಮೂಲದ ಎನ್‌ಜಿಒ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಸಂಬಂಧ ದೆಹಲಿ ಹೈಕೋರ್ಟ್ ಇಂದು ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್(ಬಿಬಿಸಿ)ಗೆ ಹೊಸ ನೋಟಿಸ್ ಜಾರಿ ಮಾಡಿದೆ.

ಬಿಬಿಸಿಯ 'ಇಂಡಿಯಾ: ದಿ ಮೋದಿ ಕ್ವೆಶ್ಚನ್' ಸಾಕ್ಷ್ಯಚಿತ್ರ ದೇಶದ ಪ್ರತಿಷ್ಠೆಗೆ ಧಕ್ಕೆ ತರಲಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ದೇಶದ ನ್ಯಾಯಾಂಗ ವ್ಯವಸ್ಥೆಗೆ ಮಾನಹಾನಿ ಮಾಡಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಎನ್‌ಜಿಒ ಜಸ್ಟೀಸ್ ಆನ್ ಟ್ರಯಲ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ದತ್ತಾ ಅವರು, ಬಿಬಿಸಿ ಬ್ರಿಟನ್ ಮತ್ತು ಬಿಬಿಸಿ(ಇಂಡಿಯಾ)ಗೆ ಹೊಸ ನೋಟಿಸ್ ಮಾಡಿದ್ದು ಡಿಸೆಂಬರ್ 15ಕ್ಕೆ ವಿಚಾರಣೆಯನ್ನು ಮುಂದೂಡಿದೆ.

Advertisement

Advertisement

ಇದನ್ನೂ ಓದಿ: BBC ತೆರಿಗೆ ವಂಚನೆ ಸಾಬೀತು: ಇದೀಗ 40 ಕೋಟಿ ರೂ. ಪಾವತಿಗೆ ಮುಂದು!

ಸಾಕ್ಷ್ಯಚಿತ್ರ ಪ್ರಸಾರದಿಂದಾಗಿ ಪ್ರಧಾನಿ ಮೋದಿ, ಭಾರತ ಸರ್ಕಾರ, ರಾಜ್ಯ ಸರ್ಕಾರಕ್ಕೆ ಉಂಟಾದ ಖ್ಯಾತಿ ಮತ್ತು ಸೌಹಾರ್ದತೆಯ ನಷ್ಟದ ಕಾರಣಕ್ಕಾಗಿ ಎನ್‌ಜಿಒ ಪ್ರತಿವಾದಿಗಳ ವಿರುದ್ಧ 10,000 ಕೋಟಿ ರೂಪಾಯಿಗಳ ನಷ್ಟಕ್ಕೆ ಕೋರಿದೆ.

ಇದಕ್ಕೂ ಮೊದಲು ಮೇ 3ರಂದು ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ಕುರಿತು ಬಿಜೆಪಿ ನಾಯಕ ಬಿನಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ  ಹಿನ್ನೆಲೆಯಲ್ಲಿ ದೆಹಲಿ ನ್ಯಾಯಾಲಯವು ಬಿಬಿಸಿ, ವಿಕಿಮೀಡಿಯಾ ಫೌಂಡೇಶನ್ ಮತ್ತು ಯುಎಸ್ ಮೂಲದ ಇಂಟರ್ನೆಟ್ ಆರ್ಕೈವ್‌ಗೆ ಸಮನ್ಸ್ ಜಾರಿ ಮಾಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments