ಯೋಧನ ಮೇಲೆ ದಾಳಿ 
ದೇಶ

ಕೇರಳ ಯೋಧ ಪ್ರಸಿದ್ಧಿ ಪಡೆಯಲು ಪಿಎಫ್ಐ ಕಥೆ ಹೆಣೆದಿದ್ದ: ಪೊಲೀಸ್ ಅಧಿಕಾರಿಗಳು!

ತನ್ನ ಮೇಲೆ ದಾಳಿ ನಡಿದಿದ್ದು, ಹಲ್ಲೆ ಮಾಡಿದವರು ಬೆನ್ನ ಮೇಲೆ ಪಿಎಫ್ಐ ಎಂದು ದೂರಿದ್ದ ಯೋಧ ಕೇವಲ ಪ್ರಚಾರ ಪ್ರಿಯತೆಯಾಗಿ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. 

ತಿರುವನಂತಪುರಂ: ತನ್ನ ಮೇಲೆ ದಾಳಿ ನಡಿದಿದ್ದು, ಹಲ್ಲೆ ಮಾಡಿದವರು ಬೆನ್ನ ಮೇಲೆ ಪಿಎಫ್ಐ ಎಂದು ದೂರಿದ್ದ ಯೋಧ ಕೇವಲ ಪ್ರಚಾರ ಪ್ರಿಯತೆಯಾಗಿ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. 

ಘಟನೆ ನಡೆದಿದೆ ಎಂದು ಯೋಧ ಸುಳ್ಳು ಹೇಳಿರುವುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ಯೋಧ ಹಾಗೂ ಆತನ ಸ್ನೇಹಿತನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾವದೇ ಬಂಧನವಾಗಿಲ್ಲ ಮತ್ತು ಯೋಧ ಶೈನ್ ಕುಮಾರ್ ಮತ್ತು ಅವರ ಸ್ನೇಹಿತನ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಅವರ ಹೇಳಿಕೆಗಳ ವಿಷಯಗಳನ್ನು ಪರಿಶೀಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಕುಮಾರ್ ಹೆಸರುವಾಸಿಯಾಗಲು ಬಯಸಿದ್ದರು ಮತ್ತು ಅದಕ್ಕಾಗಿಯೇ ಈ ಸಂಪೂರ್ಣ ಕೃತ್ಯವನ್ನು ನಡೆಸಲಾಗಿದೆ ಎಂದು ಯೋಧನ ಸ್ನೇಹಿತ ಹೇಳಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ರೀತಿ ಸುಳ್ಳು ಹೇಳಿಕೆ ನೀಡಲು ಯೋಧ ನಾನಾ ಕಾರಣಗಳನ್ನು ನೀಡುತ್ತಿದ್ದು, ಅವುಗಳನ್ನು ಪರಿಶೀಲಿಸಬೇಕಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!