ಆಸ್ಪತ್ರೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು 
ದೇಶ

ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಹತ್ಯೆ; ಭಾರೀ ಪ್ರತಿಭಟನೆ, ಮತ್ತೆ ಇಂಟರ್ನೆಟ್ ಸೇವೆ ಸ್ಥಗಿತ

ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ಖಂಡಿಸಿ ಮಂಗಳವಾರ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಗುವಾಹಟಿ: ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ಖಂಡಿಸಿ ಮಂಗಳವಾರ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

17 ವರ್ಷದ ಬಾಲಕಿ ಹಿಜಾಮ್ ಲಿಂಥೋಯಿಂಗಂಬಿ ಮತ್ತು 20 ವರ್ಷದ ಫಿಜಾಮ್ ಹೆಮ್‌ಜಿತ್ ಅವರ ಮೃತದೇಹದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವಿದ್ಯಾರ್ಥಿಗಳು ಭಾರಿ ಪ್ರತಿಭಟನೆ ನಡೆಸಿದರು.

ಇಬ್ಬರು ವಿದ್ಯಾರ್ಥಿಗಳು ಶಸ್ತ್ರಸಜ್ಜಿತ ಇಬ್ಬರು ವ್ಯಕ್ತಿಗಳೊಂದಿಗೆ ಇರುವ ಒಂದು ಫೋಟೋ ಹಾಗೂ ಮೃತ ದೇಹ ಇರುವ ಇನ್ನೊಂದು ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ವಿದ್ಯಾರ್ಥಿಗಳ ಹತ್ಯೆಯನ್ನು ಖಂಡಿಸಿ ಮತ್ತು ಕೊಲೆಯಾದ ಇಬ್ಬರಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಇಂದು ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಅಲ್ಲದೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ, ಅವರನ್ನು ಚದುರಿಸಲು ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿ ಅಶ್ರುವಾಯು ಶೆಲ್ ಮತ್ತು ಹೊಗೆ ಬಾಂಬ್‌ಗಳನ್ನು ಸಿಡಿಸಿದರು.

ಘಟನೆಯಲ್ಲಿ 50 ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಕೆಲವು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೊನೆಯದಾಗಿ ವರದಿ ಬಂದಾಗ ಪರಿಸ್ಥಿತಿ ಉದ್ವಿಗ್ನವಾಗಿತ್ತು.

ಈ ಹಿನ್ನೆಯಲ್ಲಿ ಮಣಿಪುರ ಸರ್ಕಾರ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತೆ ಮೊಬೈಲ್ ಇಂಟರ್ನೆಟ್ ಡೇಟಾ ಸೇವೆಗಳು, VPN ಮೂಲಕ ಇಂಟರ್ನೆಟ್ / ಡೇಟಾ ಸೇವೆಗಳನ್ನು ರಾಜ್ಯದಲ್ಲಿ ಐದು ದಿನಗಳ ಕಾಲ ಅಂದರೆ ಅಕ್ಟೋಬರ್ 1 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

SCROLL FOR NEXT