ಬಿಹಾರ ಸಿಎಂ ನಿತೀಶ್ ಕುಮಾರ್ 
ದೇಶ

ನಿತೀಶ್ ಕುಮಾರ್ ಎನ್‌ಡಿಎಗೆ ಮರಳುವುದಾದರೆ ಸ್ವಾಗತ: ಕೇಂದ್ರ ಸಚಿವ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್‌ಡಿಎಗೆ ಮರಳುವುದಾದರೆ ಸ್ವಾಗತಿಸುವುದಾಗಿ ರಾಷ್ಟ್ರೀಯ ಲೋಕ ಜನತಾ ಪಕ್ಷದ(ಆರ್‌ಎಲ್‌ಜೆಪಿ) ಮುಖ್ಯಸ್ಥ ಮತ್ತು ಕೇಂದ್ರ ಸಚಿವ ಪಶುಪತಿ ಕುಮಾರ್ ಪರಾಸ್ ಅವರು ಮಂಗಳವಾರ ಹೇಳಿದ್ದಾರೆ.

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್‌ಡಿಎಗೆ ಮರಳುವುದಾದರೆ ಸ್ವಾಗತಿಸುವುದಾಗಿ ರಾಷ್ಟ್ರೀಯ ಲೋಕ ಜನತಾ ಪಕ್ಷದ(ಆರ್‌ಎಲ್‌ಜೆಪಿ) ಮುಖ್ಯಸ್ಥ ಮತ್ತು ಕೇಂದ್ರ ಸಚಿವ ಪಶುಪತಿ ಕುಮಾರ್ ಪರಾಸ್ ಅವರು ಮಂಗಳವಾರ ಹೇಳಿದ್ದಾರೆ.

ನಿತೀಶ್ ಕುಮಾರ್ ಅವರು ಎನ್‌ಡಿಎಗೆ ಮರಳುವ ಸಾಧ್ಯತೆಯ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಪರಾಸ್, ಅವರು ಎನ್‌ಡಿಎಗೆ ಮರಳಿದರೆ ಅವರನ್ನು ಸ್ವಾಗತಿಸಲಾಗುವುದು ಎಂದರು.

2024ರ ಲೋಕಸಭೆ ಚುನಾವಣೆಗೆ ಮುನ್ನ ನಿತೀಶ್ ಕುಮಾರ್ ಅವರು ಮತ್ತೊಮ್ಮೆ ಬಿಜೆಪಿಯೊಂದಿಗೆ ಕೈಜೋಡಿಸುತ್ತಾರೆ ಎಂಬ ಊಹಾಪೋಹಗಳಿಗೆ ಪಾರಸ್ ಅವರ ಹೇಳಿಕೆ ಸ್ವಲ್ಪ ಪುಷ್ಠಿ ನೀಡಿದ್ದರೂ, ಸೋಮವಾರ ತಾವು ಎನ್‌ಡಿಎಗೆ ಹಿಂತಿರುಗುವುದಿಲ್ಲ ಎಂದು ಬಿಹಾರ ಸಿಎಂ ಸ್ಪಷ್ಟಪಡಿಸಿದ್ದಾರೆ.

ಇದಕ್ಕೂ ಮುನ್ನ, ಬಿಹಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿಯ ಹಿರಿಯ ನಾಯಕ ವಿಜಯ್ ಕುಮಾರ್ ಸಿನ್ಹಾ ಅವರು, ನಿತೀಶ್ ಎನ್‌ಡಿಎಗೆ ಮರಳುತ್ತಾರೆ ಎಂಬ ಊಹಾಪೋಹಗಳ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ರಾಷ್ಟ್ರೀಯವಾದಿ, ಪ್ರಾಮಾಣಿಕ ಮತ್ತು ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಯಲ್ಲಿ ನಂಬಿಕೆ ಇರುವ ಯಾರನ್ನಾದರೂ ಬಿಜೆಪಿ ಸ್ವಾಗತಿಸುತ್ತದೆ ಎಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT