ಅಭಿಷೇಕ್ ಬ್ಯಾನರ್ಜಿ 
ದೇಶ

ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್; ಪ್ರತಿಭಟನೆಯ ದಿನವೇ ವಿಚಾರಣೆಗೆ ಕರೆದಿದ್ದಾರೆ ಎಂದ ಟಿಎಂಸಿ ಸಂಸದ

ಕೋಲ್ಕತ್ತಾದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಅವರಿಗೆ ಅಕ್ಟೋಬರ್ 3 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಗುರುವಾರ ಸಮನ್ಸ್...

ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಅವರಿಗೆ ಅಕ್ಟೋಬರ್ 3 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಗುರುವಾರ ಸಮನ್ಸ್ ಜಾರಿ ಮಾಡಿದೆ.

MGNREGA ಅಡಿಯಲ್ಲಿ ರಾಜ್ಯದ ಬರಬೇಕಾದ ಅನುದಾನವನ್ನು ತಡೆಹಿಡಿಯುವ ಕೇಂದ್ರದ ನಿರ್ಧಾರದ ವಿರುದ್ಧ ದೆಹಲಿಯಲ್ಲಿ ಟಿಎಂಸಿ ಪ್ರತಿಭಟನಾ ರ್ಯಾಲಿ ಆಯೋಜಿಸಿದ ದಿನವೇ ತಮಗೆ ವಿಚಾರಣೆಗೆ ಕರೆಯಲಾಗಿದೆ ಎಂದು ಅಭಿಷೇಕ್ ಬ್ಯಾನರ್ಜಿ ಅವರು ಹೇಳಿದ್ದಾರೆ.

ಇಡಿ ತಮಗೆ ನೀಡಿರುವ ಸಮನ್ಸ್ ಪ್ರತಿಯನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಟಿಎಂಸಿ ಸಂಸದ, "ಈ ತಿಂಗಳ ಆರಂಭದಲೂ ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಮುಖ ಸಮನ್ವಯ ಸಭೆ ಇದ್ದ ದಿನದಂದೇ ಇಡಿ ನನ್ನನ್ನು ವಿಚಾರಣೆಗೆ ಕರೆದಿತ್ತು. ನಾನು ವಿಚಾರಣೆಗೆ ಹಾಜರಾಗಿದ್ದೇನೆ ಮತ್ತು ಅವರು ನೀಡಿದ್ದ ಸಮನ್ಸ್‌ಗಳನ್ನು ಪಾಲಿಸಿದ್ದೇನೆ" ಎಂದು ತಿಳಿಸಿದ್ದಾರೆ.

"ಈಗ, ಇಂದು ಮತ್ತೊಮ್ಮೆ, ಅವರು ಅಕ್ಟೋಬರ್ 3 ರಂದು ದೆಹಲಿಯಲ್ಲಿ ಪಶ್ಚಿಮ ಬಂಗಾಳತ್ತೆ ಬರಬೇಕಾದ ನ್ಯಾಯಸಮ್ಮತವಾದ ಬಾಕಿಗಾಗಿ ಪ್ರತಿಭಟನಾ ಆಂದೋಲನ ನಿಗದಿಪಡಿಸಿದ ದಿನದಂದು ವಿಚಾರಣೆಗೆ ಹಾಜರಾಗುವಂತೆ ನನಗೆ ಮತ್ತೊಂದು ಸಮನ್ಸ್ ನೀಡಿದ್ದಾರೆ. ಇದು ಅವರು ನಿಜವಾಗಿಯೂ ವಿಚಲಿತರಾಗಿದ್ದಾರೆ ಮತ್ತು ಅವರಿಗೆ ಭಯ ಶುರುವಾಗಿದೆ ಎಂಬುದನ್ನು ಬಹಿರಂಗಪಡಿಸುತ್ತದೆ!" ಎಂದು ಟಿಎಂಸಿ ನಾಯಕ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT