ದೇಶ

ತಮಿಳುನಾಡಿನಲ್ಲಿ ಭಾರೀ ಅಪಘಾತ: ನಾಲೆಗೆ ಬಿದ್ದ ಪ್ರವಾಸಿ ಬಸ್; 8 ಜನರ ಸಾವು, 25 ಮಂದಿಗೆ ಗಾಯ!

Vishwanath S

ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ 4 ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ಮೃತರು ತೆಂಕಶಿ ಜಿಲ್ಲೆಯ ಕಡಯಂ ನಿವಾಸಿಗಳು. ಅವರು ಮನೆಗೆ ಹಿಂದಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ನಂತರ ಬಸ್ ನಾಲೆಗೆ ಬಿದ್ದಿದ್ದು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಕೊಯಮತ್ತೂರ್‌ಗೆ ಕಳುಹಿಸಲಾಗಿದೆ.

ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ. ಅಪಘಾತದ ಬಗ್ಗೆ ಕಳವಳ ವ್ಯಕ್ತಪಡಿಸಿದ ಸಿಎಂ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 1 ಲಕ್ಷ ರೂಪಾಯಿ ಧನಸಹಾಯವನ್ನು ಘೋಷಿಸಿದರು.

ಸಣ್ಣಪುಟ್ಟ ಗಾಯಗಳಾಗಿರುವ ಪ್ರತಿಯೊಬ್ಬರಿಗೂ 50 ಸಾವಿರ ರೂ.ಗಳನ್ನು ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲೆ ನಿಗಾ ವಹಿಸುವಂತೆ ಪ್ರವಾಸೋದ್ಯಮ ಸಚಿವ ರಾಮಚಂದ್ರನ್ ಅವರಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಹೇಳಿದರು.

SCROLL FOR NEXT