ಸಾಂದರ್ಭಿಕ ಚಿತ್ರ 
ದೇಶ

30 ರೂಪಾಯಿಗೆ ಮೂವರ ನಡುವೆ ಜಗಳ, 17 ವರ್ಷದ ವಿದ್ಯಾರ್ಥಿಯ ಕೊಲೆ!

30 ರೂಪಾಯಿಗಾಗಿ ಮೂವರ ನಡುವೆ ಉಂಟಾದ ಜಗಳ 17 ವರ್ಷದ ವಿದ್ಯಾರ್ಥಿಯ ಹತ್ಯೆಯೊಂದಿಗೆ ಅಂತ್ಯವಾಗಿರುವ ಘಟನೆ ಉತ್ತರ ಪ್ರದೇಶದ  ಬಾಗ್ಪತ್ ಗ್ರಾಮದಲ್ಲಿ ನಡೆದಿದೆ.

ಲಖನೌ: 30 ರೂಪಾಯಿಗಾಗಿ ಮೂವರ ನಡುವೆ ಉಂಟಾದ ಜಗಳ 17 ವರ್ಷದ ವಿದ್ಯಾರ್ಥಿಯ ಹತ್ಯೆಯೊಂದಿಗೆ ಅಂತ್ಯವಾಗಿರುವ ಘಟನೆ ಉತ್ತರ ಪ್ರದೇಶದ  ಬಾಗ್ಪತ್ ಗ್ರಾಮದಲ್ಲಿ ನಡೆದಿದೆ. ಬರೌತ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಗಳು 11 ನೇ ತರಗತಿ ವಿದ್ಯಾರ್ಥಿಯ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತನನ್ನು ಕೆಎಚ್‌ಆರ್ ಇಂಟರ್ ಕಾಲೇಜಿನ ವಿದ್ಯಾರ್ಥಿ ಹೃತಿಕ್ ಎಂದು ಗುರುತಿಸಲಾಗಿದೆ. 30 ರೂಪಾಯಿಗೆ ಜಗಳ ಉಂಟಾಗಿ ಕೊಲೆಯಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಬರೌತ್ ಪೊಲೀಸ್ ಠಾಣಾಧಿಕಾರಿ ದೇವೇಶ್ ಕುಮಾರ್ ಸಿಂಗ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. 

30 ರೂಪಾಯಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಹೃತ್ತಿಕ್ ಅದೇ ಗ್ರಾಮದ ಮೂವರೊಂದಿಗೆ ಜಗಳವಾಡಿದ್ದು, ಆರೋಪಿಗಳು ಕತ್ತು ಹಿಸುಕಿ ಸಾಯಿಸಿದ್ದಾರೆ ಎಂದು ಕುಟುಂಬಸ್ಥರು ದೂರು ನೀಡಿದ್ದಾರೆ. 

ಆರೋಪಿಗಳು ಹೃತಿಕ್ ಗೆ ಪರಿಚಿತರಾಗಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ