ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಲಾಯಿತು. 
ದೇಶ

ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಗೆ 15 ದಿನ ನ್ಯಾಯಾಂಗ ಬಂಧನ

ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಮವಾರ ದೆಹಲಿ ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಮವಾರ ದೆಹಲಿ ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿ ಇಂದು ಮುಗಿದಿದ್ದು, ಆರೋಪಿಯನ್ನು ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಲಾಯಿತು. ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು, ಆರೋಪಿಯನ್ನು ಏಪ್ರಿಲ್ 15 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಎಎಪಿ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಮತ್ತು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ನ್ಯಾಯಾಲಯದಲ್ಲಿ ಹಾಜರಾಗಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಮರುದಿನ, ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಆರೋಪಿ ದೆಹಲಿ ಸಿಎಂ ಅನ್ನು ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಗೆ ನೀಡಿದ್ದರು. ನಂತರ ಕೇಜ್ರಿವಾಲ್ ಅವರ ಇಡಿ ಕಸ್ಟಡಿ ಅವಧಿಯನ್ನು ಏಪ್ರಿಲ್ 1 ರವರೆಗೆ ನಾಲ್ಕು ದಿನಗಳ ಕಾಲ ವಿಸ್ತರಿಸಿತ್ತು.

ಕಸ್ಟಡಿ ವಿಚಾರಣೆ ಸಮಯದಲ್ಲಿ ಐದು ದಿನಗಳಲ್ಲಿ ಕೇಜ್ರಿವಾಲ್ ಅವರ ಹೇಳಿಕೆಗಳನ್ನು ದಾಖಲಿಸಲಾಗಿದ್ದು, ಅವರು ತಪ್ಪಿಸಿಕೊಳ್ಳುವ ಉತ್ತರ ನೀಡುತ್ತಿದ್ದಾರೆ ಎಂದು ಇಡಿ ಹೊಸ ರಿಮಾಂಡ್ ಅರ್ಜಿಯಲ್ಲಿ ಹೇಳಿತ್ತು. ಕಸ್ಟಡಿ ಅವಧಿಯಲ್ಲಿ ಇತರ ಮೂವರ ಹೇಳಿಕೆಗಳನ್ನು ಸಹ ದಾಖಲಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT