ಸಿಎಂ ಅರವಿಂದ್ ಕೇಜ್ರಿವಾಲ್
ಸಿಎಂ ಅರವಿಂದ್ ಕೇಜ್ರಿವಾಲ್ 
ದೇಶ

ತಿಹಾರ್‌ ಜೈಲಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶಿಫ್ಟ್!

Nagaraja AB

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ನಗರದ ನ್ಯಾಯಾಲಯ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ನಂತರ ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಅಬಕಾರಿ ನೀತಿ ಸಂಬಂಧಿತ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.

ತಿಹಾರ್ ಜೈಲಿಗೆ ಕರೆತರಲಾಗಿದ್ದು, ಜೈಲು ಸಂಖ್ಯೆ 2 ರಲ್ಲಿ ಇರಿಸಲಾಗುವುದು. ವೈದ್ಯಕೀಯ ಪರೀಕ್ಷೆಗಾಗಿ ಅವರನ್ನು ಕರೆದೊಯ್ಯಲಾಗಿದ್ದು, ಅವರನ್ನು ಪ್ರತ್ಯೇಕ ಸೆಲ್‌ನಲ್ಲಿ ಇರಿಸಲಾಗುವುದು ಎಂದು ಜೈಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದೇ ಪ್ರಕರಣದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಂಧಿತರಾಗಿದ್ದ ಎಎಪಿ ನಾಯಕ ಸಂಜಯ್ ಸಿಂಗ್ ಅವರನ್ನು ಈ ಹಿಂದೆ ಜೈಲು ಸಂಖ್ಯೆ 2 ರಲ್ಲಿ ಇರಿಸಲಾಗಿತ್ತು ಆದರೆ ಇತ್ತೀಚೆಗೆ ಜೈಲು ಸಂಖ್ಯೆ 5 ಕ್ಕೆ ಸ್ಥಳಾಂತರಿಸಲಾಯಿತು.

ಇನ್ನೂ ಇದೇ ಪ್ರಕರಣದಲ್ಲಿ ಜೈಲಿನಲ್ಲಿರುವ ಕೇಜ್ರಿವಾಲ್ ಅವರ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಜೈಲು ಸಂಖ್ಯೆ 1 ರಲ್ಲಿ ಇರಿಸಲಾಗಿದ್ದು, ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರು ಮಹಿಳಾ ಜೈಲಿನ ಜೈಲು ಸಂಖ್ಯೆ 6 ರಲ್ಲಿದ್ದಾರೆ. ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅಂತ್ಯಗೊಂಡ ನಂತರ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸಂಪೂರ್ಣ ಅಸಹಕಾರದಿಂದಾಗಿ ಕೇಜ್ರಿವಾಲ್ ಅವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಇಡಿ ಕೋರಿತ್ತು.

SCROLL FOR NEXT