ಡಾ ಶಿವಕುಮಾರ ಸ್ವಾಮೀಜಿ(ಸಂಗ್ರಹ ಚಿತ್ರ) 
ದೇಶ

ಡಾ. ಶಿವಕುಮಾರ ಸ್ವಾಮೀಜಿಗಳ 117ನೇ ಜಯಂತಿ: ಪ್ರಧಾನಿ ಮೋದಿ ಕನ್ನಡದಲ್ಲಿ ನುಡಿ ನಮನ

ಇಂದು ಬೆಳಗ್ಗೆ ಮಠಕ್ಕೆ ಭೇಟಿ ನೀಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್

ಬೆಂಗಳೂರು: ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳ ಜಯಂತಿ ಇಂದು. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ತಮ್ಮ ನುಡಿ ನಮನ ತಿಳಿಸಿದ್ದಾರೆ.

ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ ಎಂದು ಭರವಸೆ ನೀಡಿದ್ದಾರೆ. ‘ಪರಮಪೂಜ್ಯ ಡಾ. ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ ಮಾನವೀಯ ಸೇವೆಗೆ ಅತ್ಯುನ್ನತ ಉದಾಹರಣೆಯಾಗಿದೆ. ನಮ್ಮ ಸಮಾಜದ ಕುರಿತಾಗಿ ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ’ ಎಂದು ಟ್ವೀಟ್ ಮಾಡಿದ್ದಾರೆ.

ಶ್ರೀಗಳ 117 ನೇ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಸರಳವಾಗಿ ಜಯಂತಿ ಆಚರಣೆ ಮಾಡಲಾಗುತ್ತಿದೆ. ಜಯಂತಿ ಪ್ರಯುಕ್ತ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ, ಮಹಾಮಂಗಳಾರತಿ ಸೋಮವಾರ ಬೆಳಗ್ಗೆ ನೆರವೇರಿತು. ವಿವಿಧ ಮಠಾಧೀಶರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಭಾಗಿಯಾದರು. 11 ಗಂಟೆಗೆ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ನಡೆಯುತ್ತಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ರಾಜಕಾರಣಿಗಳು, ಜನಪ್ರತಿನಿಧಿಗಳು ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದಿಲ್ಲ.

ಸಚಿವರು ಭೇಟಿ: ಇಂದು ಬೆಳಗ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದರು. ಬಳಿಕ ಶ್ರೀ ಸಿದ್ಧಲಿಂಗೇಶ್ವರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ರುದ್ರಾಕ್ಷಿ ಮಂಟಪದಲ್ಲಿ ಶಿವಕುಮಾರ ಶ್ರೀಗಳ ಪ್ರತಿಮೆ ಮೆರವಣಿಗೆ ನಡೆಸಲಾಯಿತು. ಪುಷ್ಪಾಲಂಕಾರದೊಂದಿಗೆ ಸಿಂಗಾರಗೊಂಡಿರುವ ರುದ್ರಾಕ್ಷಿ ಮಂಟಪದಲ್ಲಿ ಗದ್ದುಗೆ ಬಳಿಯಿಂದ ವಸ್ತು ಪ್ರದರ್ಶನ ಆವರಣದವರೆಗೆ ಮೆರವಣಿಗೆ ನಡೆಯಿತು. ಮೆರವಣಿಗೆ ವೇಳೆ ಸಿದ್ಧಗಂಗಾ ಮಠದ ಭಕ್ತರು, ಮಕ್ಕಳು ಭಾಗಿಯಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT