ಅಜಯ್ ನಿಶಾದ್ 
ದೇಶ

ಬಿಹಾರ: ಬಿಜೆಪಿ ತೊರೆದು ಸಂಸದ ಅಜಯ್ ನಿಶಾದ್ ಕಾಂಗ್ರೆಸ್‌ ಸೇರ್ಪಡೆ!

ಲೋಕಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ಬಿಹಾರದ ಮುಜಾಫರ್ ಪುರ ಕ್ಷೇತ್ರದ ಹಾಲಿ ಸಂಸದ ಅಜಯ್ ನಿಶಾದ್ ಮಂಗಳವಾರ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ನವದೆಹಲಿ: ಲೋಕಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ಬಿಹಾರದ ಮುಜಾಫರ್ ಪುರ ಕ್ಷೇತ್ರದ ಹಾಲಿ ಸಂಸದ ಅಜಯ್ ನಿಶಾದ್ ಮಂಗಳವಾರ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಎಐಸಿಸಿ ಕಚೇರಿಯಲ್ಲಿಂದು ನಡೆದ ಸರಳ ಸಮಾರಂಭದಲ್ಲಿ ಪವನ್ ಖೇರಾ ಮತ್ತಿತರ ನಾಯಕರ ಸಮ್ಮುಖದಲ್ಲಿ ಅಜಯ್ ನಿಶಾದ್ ಕಾಂಗ್ರೆಸ್ ಸೇರ್ಪಡೆಯಾದರು.

ಇದಕ್ಕೂ ಮುನ್ನಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ರಾಜೀನಾಮೆ ನಿರ್ಧಾರ ಪ್ರಕಟಿಸಿದ ನಿಶಾದ್, ಜೆ. ಪಿ. ನಡ್ಡಾ ಅವರೇ ಬಿಜೆಪಿಯ ದ್ರೋಹದಿಂದ ಆಘಾತಗೊಂಡು, ಪಕ್ಷದ ಎಲ್ಲಾ ಸ್ಥಾನಗಳು ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಎಕ್ಸ್ ನಲ್ಲಿ ತಮ್ಮ ಹೆಸರಿನಿಂದ 'ಮೋದಿ ಕಾ ಪರಿವಾರ' ಟ್ಯಾಗ ಕೈಬಿಟ್ಟ ನಂತರ ಅವರು ಬಿಜೆಪಿಯೊಂದಿಗೆ ಸಂಬಂಧವನ್ನು ಮುರಿದುಕೊಳ್ಳುತ್ತಾರೆ ಎಂಬ ಊಹಾಪೋಹಗಳು ಪ್ರಾರಂಭವಾಗಿತ್ತು.

ಮುಜಾಫರ್ ಪುರದಿಂದ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಣೆಯಿಂದ ನಿಶಾದ್ ಅಸಮಾಧಾನಗೊಂಡಿದ್ದರು. 2014 ರಿಂದ ಸತತ ಎರಡು ಅವಧಿಗೆ ಗೆದ್ದಿರುವ ಸ್ಥಾನದಿಂದ ಕಾಂಗ್ರೆಸ್ ಅವರಿಗೆ ಟಿಕೆಟ್ ನೀಡಬಹುದು ಎನ್ನಲಾಗಿದೆ.

2014 ರ ಲೋಕಸಭಾ ಚುನಾವಣೆಯಲ್ಲಿ ನಿಶಾದ್ ಅವರು ಕಾಂಗ್ರೆಸ್ ಪಕ್ಷದ ಬಿಹಾರ ಘಟಕದ ಮುಖ್ಯಸ್ಥ ಅಖಿಲೇಶ್ ಪ್ರಸಾದ್ ಸಿಂಗ್ ಅವರನ್ನು ಸುಮಾರು 2,22,000 ಮತಗಳ ಅಂತರದಿಂದ ಸೋಲಿಸಿದರು. 2019 ರ ಲೋಕಸಭೆ ಚುನಾವಣೆಯಲ್ಲಿ

ವಿಕಾಸಶೀಲ ಇನ್ಸಾನ್ ಪಕ್ಷದ ಅಭ್ಯರ್ಥಿ ರಾಜ್ ಭೂಷಣ್ ಚೌಧರಿ ವಿರುದ್ಧ ಗೆಲುವು ಸಾಧಿಸಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮುಜಫರ್‌ಪುರದಿಂದ ರಾಜ್ ಭೂಷಣ್ ಚೌಧರಿ ನಿಶಾದ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT