ಬಿಜೆಪಿ ಸೇರಿದ ಬಾಕ್ಸರ್ ವಿಜೇಂದರ್ ಸಿಂಗ್
ಬಿಜೆಪಿ ಸೇರಿದ ಬಾಕ್ಸರ್ ವಿಜೇಂದರ್ ಸಿಂಗ್ 
ದೇಶ

ಲೋಕಸಭೆ ಚುನಾವಣೆ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಾಕ್ಸರ್ ವಿಜೇಂದರ್ ಸಿಂಗ್

Lingaraj Badiger

ನವದೆಹಲಿ: ಬಾಕ್ಸಿಂಗ್‌ನಲ್ಲಿ ಭಾರತದ ಮೊದಲ ಒಲಿಂಪಿಕ್ ಪದಕ ವಿಜೇತ ಹಾಗೂ ಕಾಂಗ್ರೆಸ್ ನಾಯಕ ವಿಜೇಂದರ್ ಸಿಂಗ್ ಅವರು ಬುಧವಾರ ಬಿಜೆಪಿ ಸೇರಿದ್ದಾರೆ.

ವಿಜೇಂದರ್ ಸಿಂಗ್ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.

ಮಥುರಾ ಕ್ಷೇತ್ರದಿಂದ ನಟಿ ಮತ್ತು ಹಾಲಿ ಸಂಸದೆ ಹೇಮಾ ಮಾಲಿನಿ ವಿರುದ್ಧ 38ರ ಹರೆಯದ ವಿಜೇಂದರ್ ಸಿಂಗ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಯೋಜಿಸಿತ್ತು. ಆದರೆ ವಿಜೇಂದರ್ ಸಿಂಗ್ ಅವರು ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ.

ಜಾಟ್ ಸಮುದಾಯದ ವಿಜೇಂದರ್ ಸಿಂಗ್ ಅವರು ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಹೆಚ್ಚಿನ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ವಿಜೇಂದರ್ ಸಿಂಗ್ ಅವರು 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದಿದ್ದರು. ಬಳಿಕ 2009ರ ವಿಶ್ವ ಚಾಂಪಿಯನ್ ಶಿಪ್ ಮತ್ತು 2010ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಪಡೆದಿದ್ದರು.

SCROLL FOR NEXT