ಮದ್ಯಪ್ರದೇಶ: 12 ದಿನದ ಹಸುಗೂಸು ಸೇರಿ ಒಂದೇ ಕುಟುಂಬದ ನಾಲ್ವರು ನಿಗೂಢ ಸಾವು! 
ದೇಶ

ಮಹಾರಾಷ್ಟ್ರದಲ್ಲಿ ಅಗ್ನಿ ಅವಘಢ: ಮಗು ಸೇರಿ ಒಂದೇ ಕುಟುಂಬದ 7 ಮಂದಿ ದುರ್ಮರಣ!

3 ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ 7 ಮಂದಿ ದುರ್ಮರಣವನ್ನಪ್ಪಿರುವ ದುರ್ಘಟನೆ ಛತ್ರಪತಿ ಸಂಬಾಜಿನಗರದ ಕ್ಯಾಂಪ್ ಪ್ರದೇಶದ ಜೈನ ಮಂದಿರದ ಬಳಿ ನಡೆದಿದೆ.

ಔರಂಗಬಾದ್ (ಮಹಾರಾಷ್ಟ್ರ): 3 ಅಂತಸ್ತಿನ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ 7 ಮಂದಿ ದುರ್ಮರಣವನ್ನಪ್ಪಿರುವ ದುರ್ಘಟನೆ ಛತ್ರಪತಿ ಸಂಬಾಜಿನಗರದ ಕ್ಯಾಂಪ್ ಪ್ರದೇಶದ ಜೈನ ಮಂದಿರದ ಬಳಿ ನಡೆದಿದೆ.

ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ, ಸುದ್ದಿತಿಳಿದು ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಕಂಟೋನ್ಮೆಂಟ್ ಪೊಲೀಸರು ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಮಕ್ಕಳು, ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ನೆಲಮಹಡಿಯಲ್ಲಿದ್ದ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಘಟನೆ ಕುರಿತು ಪೊಲೀಸ್ ಕಮಿಷನರ್ ಮನೋಜ್ ಲೋಹಿಯಾ ಪ್ರತಿಕ್ರಿಯಿಸಿ, ಕಂಟೋನ್ಮೆಂಟ್ ಪ್ರದೇಶದಲ್ಲಿನ ಗಾರ್ಮೆಂಟ್ಸ್ ಅಂಗಡಿಯಲ್ಲಿ ಬೆಳಗಿನ ಜಾವ 4 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಈವೇಳೆ ಗಾಢ ನಿದ್ರೆಯಲ್ಲಿದ್ದ ಒಂದೇ ಕುಟುಂಬದ 7 ಜನರು ಸಾವನ್ನಪ್ಪಿದ್ದಾರೆ. ಮೊದಲಿಗೆ ಆರು ಇದ್ದ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಘಟನೆಗೆ ಇನ್ನೂ ಸೂಕ್ತ ಕಾರಣ ತಿಳಿದು ಬಂದಿಲ್ಲ.

ಈಗಾಗಲೇ ಸ್ಥಳದಲ್ಲಿ ಪರಿಶೀಲನೆ ನಡೆಸಲಾಗಿದೆ. ಪೊಲೀಸ್​ ಸಿಬ್ಬಂದಿ ಸ್ಥಳದಲ್ಲೇ ಇದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಎರಡು ಮತ್ತು ಮೂರು ವರ್ಷದ ಮಗು ಕೂಡ ಸಾವನ್ನಪ್ಪಿದ್ದಾರೆ. ಎಲ್ಲ ಮೃತ ದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT