ಸುಶೀಲ್ ಕುಮಾರ್ ಮೋದಿ 
ದೇಶ

ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ; ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸುಶೀಲ್ ಕುಮಾರ್ ಮೋದಿ

ಕಳೆದ 6 ತಿಂಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ ಸುಶೀಲ್ ಮೋದಿ ಅವರು ಹೇಳಿದ್ದಾರೆ

ನವದೆಹಲಿ: ಕಳೆದ 6 ತಿಂಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕ ಸುಶೀಲ್ ಮೋದಿ ಅವರು ಹೇಳಿದ್ದಾರೆ. ಈ ಬೆಳವಣಿಗೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಎಕ್ಸ್​​​ನಲ್ಲಿ ಬರೆದುಕೊಂಡಿರುವ ಮಾಡಿದ್ದಾರೆ. ಜನರಿಗೆ ಹೇಳುವ ಸಮಯ ಬಂದಿದೆ ತನ್ನ ಆರೋಗ್ಯದ ಬಗ್ಗೆ ಜನರ ಮುಂದೆ ಹೇಳುತ್ತಿದ್ದೇನೆ ಎಂದು 72 ವರ್ಷದ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಹೇಳಿದ್ದಾರೆ. ದೇಶ, ಬಿಹಾರ ಮತ್ತು ಪಕ್ಷಕ್ಕೆ ಸದಾ ಕೃತಜ್ಞರಾಗಿರುತ್ತೇನೆ ಎಂದು ಹೇಳಿದ್ದಾರೆ.

ಇನ್ನು ಸುಶೀಲ್​​ ಮೋದಿ ಅವರ ಈ ಹೇಳಿಕೆಗೆ ಬಿಜೆಪಿ ನಾಯಕ ಮತ್ತು ಪಕ್ಷದ ಸಂಸದ ರವಿಶಂಕರ್ ಪ್ರಸಾದ್ ಪ್ರತಿಕ್ರಿಯಿಸಿದ್ದ, ಇದರಿಂದ ನನಗೆ ತೀವ್ರ ನೋವುಂಟಾಗಿದೆ ಎಂದು ಹೇಳಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ. ಸುಶೀಲ್ ಮೋದಿ ಜುಲೈ 2017 ರಿಂದ ನವೆಂಬರ್ 2020 ರವರೆಗೆ ಬಿಹಾರದ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು ಎಂದು ಹೇಳಿದ್ದಾರೆ.

ಬಿಜೆಪಿ ಪಕ್ಷ ಮತ್ತು ಪ್ರಧಾನಿ ಮೋದಿ ಅವರಿಗೆ ನಾನು ಧನ್ಯವಾದಗಳು ತಿಳಿಸುವೇ, ರಾಜ್ಯಸಭೆಗೆ ಅವಕಾಶ ನೀಡಿದ ಬಿಜೆಪಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದ 27 ಸದಸ್ಯರ ಚುನಾವಣಾ ಪ್ರಣಾಳಿಕೆ ಸಮಿತಿಯಲ್ಲಿ ಸುಶೀಲ್​​​​ ಮೋದಿ ಅವರು ಕೂಡ ಇದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT