ಸಾಂದರ್ಭಿಕ ಚಿತ್ರ 
ದೇಶ

ಲಖನೌ: ವಿಮಾನ ನಿಲ್ದಾಣದಲ್ಲಿ ವಿಚಾರಣೆಗಾಗಿ ವಶದಲ್ಲಿದ್ದ 30 ಪ್ರಯಾಣಿಕರು ಪರಾರಿ!

ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಲಖನೌದ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಬಂಧಿತರಾಗಿದ್ದ ಪೈಕಿ ಒಬ್ಬರು ಅನಾರೋಗ್ಯದವರಂತೆ ನಟಿಸಿ ಗೊಂದಲ ಸೃಷ್ಟಿಸಿದ ನಂತರ 30 ಮಂದಿ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಖನೌ: ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಲಖನೌದ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ಬಂಧಿತರಾಗಿದ್ದ ಪೈಕಿ ಒಬ್ಬರು ಅನಾರೋಗ್ಯದವರಂತೆ ನಟಿಸಿ ಗೊಂದಲ ಸೃಷ್ಟಿಸಿದ ನಂತರ 30 ಮಂದಿ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಸ್ಟಮ್ ಮತ್ತು ಪೊಲೀಸ್ ಅಧಿಕಾರಿಗಳು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿರುವುದಾಗಿ ಅವರು ಹೇಳಿದ್ದಾರೆ.

ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮತ್ತು ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಸೋಮವಾರ ಶಾರ್ಜಾದಿಂದ ಬಂದಿದ್ದ 36 ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ತಡೆದಿದ್ದರು. ನಂತರ ಅವರನ್ನು ತಪಾಸಣೆಗೆ ಒಳಪಡಿಸಿದಾಗ ಕೆಲವರಿಂದ 3 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸಿಗರೇಟ್ ಮತ್ತು 23.90 ಲಕ್ಷ ರೂಪಾಯಿ ಮೌಲ್ಯದ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಈ ಪೈಕಿ ಆರು ಪ್ರಯಾಣಿಕರು ತಾವು ಚಿನ್ನವನ್ನು ಸಾಗಿಸುತ್ತಿರುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಶಶಾಂಕ್ ಸಿಂಗ್ ಹೇಳಿದ್ದಾರೆ.

ಮಂಗಳವಾರ ಉಳಿದ 30 ಪ್ರಯಾಣಿಕರನ್ನು ವಿಚಾರಣೆಗೆ ಒಳಪಡಿಸಿದಾಗ ಅವರಲ್ಲಿ ಒಬ್ಬರು ಅಸ್ವಸ್ಥರಂತೆ ನಟಿಸಿ ಗೊಂದಲ ಸೃಷ್ಟಿಸಿದ್ದರು. ಇದರ ಲಾಭ ಪಡೆದು ಎಲ್ಲರೂ ಪರಾರಿಯಾಗಿದ್ದಾರೆ. ಈ ಸಂಬಂಧ ದೂರಿನ ಮೇರೆಗೆ ಸಂಬಂಧಪಟ್ಟ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!