ಅನಿಲ್ ಮಸಿಹ್  
ದೇಶ

ಸುಪ್ರೀಂ ಕೋರ್ಟ್ ಗೆ ಕ್ಷಮೆಯಾಚಿಸಿದ ಚಂಡೀಗಢ ಮೇಯರ್ ಚುನಾವಣಾ ಅಧಿಕಾರಿ

ಚಂಡೀಗಢ ಮೇಯರ್ ಚುನಾವಣೆ ವೇಳೆ ತಾನೇ ಮತ ಪತ್ರಗಳನ್ನು ತಿದ್ದುವ ಮೂಲಕ ಅಸಿಂಧುಗೊಳಿಸಿದ್ದ ಚುನಾವಣಾಧಿಕಾರಿ ಅನಿಲ್ ಮಸಿಹ್ ಅವರು ಸುಪ್ರೀಂ ಕೋರ್ಟ್‌ಗೆ ಬೇಷರತ್ ಕ್ಷಮೆಯಾಚಿಸಿದ್ದಾರೆ.

ನವದೆಹಲಿ: ಕಳೆದ ಫೆಬ್ರವರಿಯಲ್ಲಿ ನಡೆದ ಚಂಡೀಗಢ ಮೇಯರ್ ಚುನಾವಣೆ ವೇಳೆ ತಾನೇ ಮತ ಪತ್ರಗಳನ್ನು ತಿದ್ದುವ ಮೂಲಕ ಅಸಿಂಧುಗೊಳಿಸಿದ್ದ ಚುನಾವಣಾಧಿಕಾರಿ ಅನಿಲ್ ಮಸಿಹ್ ಅವರು ತಮ್ಮ ತಪ್ಪನ್ನು ಒಪ್ಪಿಕೊಂಡು ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಚಂಡೀಗಢ ಮೇಯರ್ ಚುನಾವಣೆಯ ಫಲಿತಾಂಶವನ್ನೇ ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್‌, ಅನಿಲ್ ಮಸಿಹ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಕೋರ್ಟ್ ಮುಂದೆ ಸುಳ್ಳು ಹೇಳಿಕೆ ನೀಡಿದ್ದಕ್ಕಾಗಿ ಮತ್ತು ಮತ ಎಣಿಕೆಯ ಸಮಯದಲ್ಲಿನ ಅವರ "ದುಷ್ಕೃತ್ಯ" ಕ್ಕಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶಿಸಿತ್ತು.

ತಾನು ಖಿನ್ನತೆ ಮತ್ತು ಆತಂಕದಿಂದ ತತ್ತರಿಸುತ್ತಿದ್ದೇನೆ. ಮತಪತ್ರಗಳನ್ನು ತಿದ್ದಿದ ಆರೋಪ ನಿರಾಕರಿಸಿದ ಹಿಂದಿನ ಅಫಿಡವಿಟ್ ಅನ್ನು ಹಿಂಪಡೆಯುವುದಾಗಿ ಮಸಿಹ್ ಸುಪ್ರೀಂ ಕೋರ್ಟ್ ತಿಳಿಸಿದ್ದಾರೆ.

"ಜನವರಿ 31 ರಂದು ಚುನಾವಣಾ ಪ್ರಕ್ರಿಯೆ ವೀಡಿಯೊ ರೆಕಾರ್ಡಿಂಗ್ ಆನ್‌ಲೈನ್‌ನಲ್ಲಿ ಸೋರಿಕೆಯಾದ ಅದರ ನಂತರ ತಮ್ಮ ವಿರುದ್ಧ ರಾಜಕೀಯ ಪಕ್ಷಗಳಿಂದ ಮತ್ತು ಸಾಮಾಜಿಕ ಮಾಧ್ಯಮಗಳಿಂದ ತೀವ್ರ ಟೀಕೆ ಎದುರಿಸುತ್ತಿದ್ದು, ಕುಟುಂಬ ಸದಸ್ಯರು ಸೇರಿದಂತೆ, ನಾನು ಅಪಾರ ಮಾನಸಿಕ ಆಘಾತ ಮತ್ತು ಒತ್ತಡ ಎದುರಿಸುತ್ತಿರುವುದಾಗಿ ” ಚುನಾವಣಾ ಅಧಿಕಾರಿ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಚುನಾವಣಾ ಅಧಿಕಾರಿ ಅನಿಲ್ ಮಸಿಹ್ ಅವರು ಚುನಾವಣೆಯಲ್ಲಿ ಅವ್ಯವಹಾರ ಎಸಗಿದ್ದಾರೆ ಎಂದು ಆರೋಪಿಸಿ ಪರಾಜಿತ ಎಎಪಿ ಅಭ್ಯರ್ಥಿ ಕುಲದೀಪ್ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ಫಲಿತಾಂಶವನ್ನೇ ರದ್ದುಗೊಳಿಸಿ, ಮರು ಮತ ಎಣಿಕಿಗೆ ಆದೇಶಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT