ಕೆ ಕವಿತಾ
ಕೆ ಕವಿತಾ  
ದೇಶ

ದೆಹಲಿ ಅಬಕಾರಿ ನೀತಿ ಪ್ರಕರಣ: ತಿಹಾರ್ ಜೈಲಿನಲ್ಲಿ ಕೆ ಕವಿತಾ ವಿಚಾರಣೆಗೆ ಒಳಪಡಿಸಲು ಸಿಬಿಐಗೆ ಕೋರ್ಟ್ ಅನುಮತಿ

Lingaraj Badiger

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರನ್ನು ತಿಹಾರ್‌ ಜೈಲಿನಲ್ಲಿಯೇ ವಿಚಾರಣೆ ನಡೆಸಲು ದೆಹಲಿ ನ್ಯಾಯಾಲಯ ಶುಕ್ರವಾರ ಸಿಬಿಐಗೆ ಅನುಮತಿ ನೀಡಿದೆ.

ಮಾರ್ಚ್ 15 ರಂದು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆ ಕವಿತಾ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿತ್ತು.

ನ್ಯಾಯಾಂಗ ಬಂಧನದಲ್ಲಿರುವ ಕವಿತಾ ಅವರನ್ನು ಜೈಲಿನಲ್ಲಿಯೇ ವಿಚಾರಣೆ ನಡೆಸಲು ಅನುಮತಿ ಕೋರಿ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಸಲ್ಲಿಸಿದ್ದ ಅರ್ಜಿಯ ಮೇರೆಗೆ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

ಇಡಿ ಮತ್ತು ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಕವಿತಾ ಅವರನ್ನು ಜೈಲಿನಲ್ಲಿಯೇ ವಿಚಾರಣೆ ಮಾಡಲು ಸಿಬಿಐಗೆ ಅನುಮತಿ ನೀಡಿದ್ದಾರೆ.

ತನ್ನ 16 ವರ್ಷದ ಮಗನ ಪರೀಕ್ಷೆ ಇರುವ ಕಾರಣಕ್ಕಾಗಿ ತಾಯಿಯ “ನೈತಿಕ ಮತ್ತು ಭಾವನಾತ್ಮಕ ಬೆಂಬಲ” ನೀಡಲು ತಮಗೆ ಮಧ್ಯಂತರ ಜಾಮೀನು ನೀಡುವಂತೆ ಕೋರಿ ಕವಿತಾ ಗುರುವಾರ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಇಡಿ ಮಾರ್ಚ್ 15 ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಲ್ಲಿ ಕೆ ಕವಿತಾ(46) ಅವರನ್ನು ಬಂಧಿಸಿತ್ತು.

SCROLL FOR NEXT