ಲಾಲು ಪ್ರಸಾದ್ ಯಾದವ್
ಲಾಲು ಪ್ರಸಾದ್ ಯಾದವ್ 
ದೇಶ

ಶಸ್ತ್ರಾಸ್ತ್ರ ಪ್ರಕರಣ: ಮಧ್ಯ ಪ್ರದೇಶ ಕೋರ್ಟ್ ನಿಂದ ಲಾಲು ವಿರುದ್ಧ ಶಾಶ್ವತ ಬಂಧನ ವಾರಂಟ್

Lingaraj Badiger

ಗ್ವಾಲಿಯರ್‌: 1995 ರಿಂದ 97ರಲ್ಲಿ ಅಕ್ರಮವಾಗಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಖರೀದಿಸಿದ ಪ್ರಕರಣದಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ (75) ವಿರುದ್ಧ ಮಧ್ಯಪ್ರದೇಶದ ಗ್ವಾಲಿಯರ್‌ನ ವಿಶೇಷ ನ್ಯಾಯಾಲಯ ಶುಕ್ರವಾರ ಶಾಶ್ವತ ಬಂಧನ ವಾರಂಟ್ ಹೊರಡಿಸಿದೆ.

ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಮಹೇಂದ್ರ ಸೈನಿ ಅವರು ಲಾಲು ಯಾದವ್ ವಿರುದ್ಧ ಶಾಶ್ವತ ಬಂಧನ ವಾರಂಟ್ ಹೊರಡಿಸಿದ್ದಾರೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಅಭಿಷೇಕ್ ಮೆಹ್ರೋತ್ರಾ ಹೇಳಿದ್ದಾರೆ.

1995-97ರ ಪ್ರಕರಣವು ನಕಲಿ ದಾಖಲೆಗಳನ್ನು ಬಳಸಿ ಅಧಿಕೃತ ಡೀಲರ್‌ನಿಂದ ಶಸ್ತ್ರಾಸ್ತ್ರಗಳನ್ನು ಖರೀದಿಸಿದ ಪ್ರಕರಣಕ್ಕೆ ಸಂಬಂಧಿಸಿದೆ. ಪ್ರಕರಣದಲ್ಲಿ 23 ಆರೋಪಿಗಳಿದ್ದು, ಇಂದರ್‌ಗಂಜ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಎಲ್ಲರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ. ಈ ಪೈಕಿ ಲಾಲು ಪ್ರಸಾದ್ ಯಾದವ್ ಅವರು ತಲೆಮರೆಸಿಕೊಂಡಿದ್ದಾರೆ ಎಂದು ಘೋಷಿಸಲಾಗಿದೆ" ಎಂದು ಅವರು ಹೇಳಿದರು.

ಪ್ರಾಸಿಕ್ಯೂಷನ್ ಪ್ರಕಾರ, ಆರ್‌ಜೆಡಿ ನಾಯಕನ ಪರವಾಗಿ ಯಾರೂ ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಶಾಶ್ವತ ಬಂಧನ ವಾರಂಟ್ ಹೊರಡಿಸಲಾಗಿದೆ.

ಜಾಮೀನು, ಬಂಧನ ಅಥವಾ ಜಾಮೀನು ರಹಿತ ಬಂಧನ ವಾರಂಟ್‌ಗಳನ್ನು ಹೊರಡಿಸಿದ ನಂತರವೂ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಶಾಶ್ವತ ಬಂಧನ ವಾರಂಟ್ ನೀಡಲಾಗುತ್ತದೆ ಎಂದು ಜಬಲ್‌ಪುರ ಮೂಲದ ಹೈಕೋರ್ಟ್ ವಕೀಲ ರಾಕೇಶ್ ಪಾಂಡೆ ಅವರು ತಿಳಿಸಿದ್ದಾರೆ.

SCROLL FOR NEXT