ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ 
ದೇಶ

ಪಂಜಾಬ್: 55 ವರ್ಷದ ಮಹಿಳೆ ಮೇಲೆ ಹಲ್ಲೆ, ಅರೆಬೆತ್ತಲೆ ಮೆರವಣಿಗೆ!

Nagaraja AB

ತರ್ನ್ ತರಣ್: ವಧುವಿನ ಪೋಷಕರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ 55 ವರ್ಷದ ವರನ ತಾಯಿಗೆ ಬೀಗರು ಹಲ್ಲೆ ನಡೆಸಿ, ಅರೆಬೆತ್ತಲೆ ಮೆರವಣಿಗೆ ಮಾಡಿರುವ ಪಂಜಾಬಿನ ತರ್ನ್ ತರನ್ ನಲ್ಲಿ ನಡೆದಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಸಂತ್ರಸ್ತೆಯನ್ನು ಅರೆಬೆತ್ತಲೆ ಮೆರವಣಿಗೆ ಮಾಡುತ್ತಿರುವ ವಿಡಿಯೋ ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಮಾರ್ಚ್ 31 ರಂದು ಸಂತ್ರಸ್ತೆಯ ಮಗ ಯುವತಿಯೊಂದಿಗೆ ಓಡಿಹೋಗಿ ಆಕೆಯ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಅವಳನ್ನು ಮದುವೆಯಾದ ಕೆಲವು ದಿನಗಳ ನಂತರ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ನೀಡಿರುವ ದೂರಿನ ಪ್ರಕಾರ, ಆಕೆ ತನ್ನ ಮನೆಯಲ್ಲಿ ಒಬ್ಬಳೇ ಇದ್ದಾಗ ಆಕೆಯ ಮಗನ ಮಾವನ ಮನೆಯವರು ಆಕೆಯ ಮೇಲೆ ಹಲ್ಲೆ ನಡೆಸಿ ಬಟ್ಟೆ ಹರಿದು ಹಾಕಿದ್ದಾರೆ. ನಂತರ ಅರೆಬೆತ್ತಲೆ ಸ್ಥಿತಿಯಲ್ಲಿ ಗ್ರಾಮದಲ್ಲಿ ಮೆರವಣಿಗೆ ಮಾಡಿದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಈ ಪ್ರಕರಣದಲ್ಲಿ ಐವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮೂವರನ್ನು ಕುಲ್ವಿಂದರ್ ಕೌರ್ ಮಣಿ, ಶರಣಜಿತ್ ಸಿಂಗ್ ಶಾನಿ ಮತ್ತು ಗುರ್ಚರಣ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ, ಏಪ್ರಿಲ್ 3 ರಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲ), 354 ಬಿ (ವಿವಸ್ತ್ರಗೊಳ್ಳುವ ಉದ್ದೇಶದಿಂದ ಮಹಿಳೆಯ ಮೇಲೆ ಹಲ್ಲೆ) 354D (ಹಿಂಬಾಲಿಸುವಿಕೆ), 323 (ಸ್ವಯಂಪ್ರೇರಿತವಾಗಿ ಗಾಯವನ್ನು ಉಂಟುಮಾಡುವುದು) ಮತ್ತು 149 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದಲ್ಲಿ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

SCROLL FOR NEXT