ಮನೋಜ್ ಸಿನ್ಹಾ 
ದೇಶ

ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ರಾಜೀನಾಮೆ ನೀಡಿ, ಲೋಕಸಭೆ ಚುನಾವಣೆಗೆ ಸ್ಪರ್ಧೆ ಸಾಧ್ಯತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಮತ್ತು ಘಾಜಿಪುರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಮೂಲಗಳು ಸೋಮವಾರ ತಿಳಿಸಿವೆ.

ಉತ್ತರ ಪ್ರದೇಶದ ಗಾಜಿಪುರದ ಮನೋಜ್ ಸಿನ್ಹಾ ಅವರು ಆಗಸ್ಟ್ 7, 2020 ರಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಂಡರು ಮತ್ತು ನರೇಂದ್ರ ಮೋದಿ ಸರ್ಕಾರದಲ್ಲಿ ಮೇ 2014 ರಿಂದ ಮೇ 2019 ರವರೆಗೆ ಕೇಂದ್ರ ಸಚಿವರಾಗಿದ್ದರು.

ಗಾಜಿಪುರದಲ್ಲಿ 2014 ರಲ್ಲಿ ಸಮಾಜವಾದಿ ಪಕ್ಷದ ಶಿವಕನ್ಯಾ ಕುಶ್ವಾಹಾ ಅವರನ್ನು ಸೋಲಿಸಿದ ಸಿನ್ಹಾ, 2019 ರಲ್ಲಿ ಬಿಎಸ್ಪಿಯ ಅನ್ಸಾರಿ ವಿರುದ್ಧ ಸೋತಿದ್ದರು.

2019 ರಲ್ಲಿ ಬಿಎಸ್‌ಪಿ ಗೆದ್ದಿದ್ದ ಘಾಜಿಪುರ ಸೇರಿದಂತೆ ಉತ್ತರ ಪ್ರದೇಶದ ಕೆಲವು ಸ್ಥಾನಗಳಿಗೆ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿಲ್ಲ. 1996, 1999 ರಲ್ಲಿ ಮೂರು ಬಾರಿ ಸಂಸದರಾಗಿದ್ದ ಬಿಜೆಪಿಯ ಮನೋಜ್ ಸಿನ್ಹಾ ಅವರನ್ನು 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಗಾಜಿಪುರ ಕ್ಷೇತ್ರದಿಂದ ಕಣಕ್ಕಿಳಿಸಬಹುದು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?