ರಾಜೀವ್ ಚಂದ್ರಶೇಖರ್
ರಾಜೀವ್ ಚಂದ್ರಶೇಖರ್  
ದೇಶ

ಕಾಂಗ್ರೆಸ್ ದೂರಿನ ನಂತರ ರಾಜೀವ್ ಚಂದ್ರಶೇಖರ್ ಅಫಿಡವಿಟ್ ಪರಿಶೀಲಿಸುವಂತೆ CBDTಗೆ ಚುನಾವಣಾ ಆಯೋಗ ಸೂಚನೆ

Lingaraj Badiger

ನವದೆಹಲಿ: ಕೇಂದ್ರ ಸಚಿವ ಹಾಗೂ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೀವ್‌ ಚಂದ್ರಶೇಖರ್‌ ಅವರು ನಾಮಪತ್ರ ಸಲ್ಲಿಸುವ ವೇಳೆ ಅಫಿಡವಿಟ್‌ ನಲ್ಲಿ ತಮ್ಮ ಆಸ್ತಿಯ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಪರಿಶೀಲಿಸುವಂತೆ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ(ಸಿಬಿಡಿಟಿ)ಗೆ ಚುನಾವಣಾ ಆಯೋಗ ಮಂಗಳವಾರ ನಿರ್ದೇಶನ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ವಿರುದ್ಧ ಸ್ಪರ್ಧಿಸಿರುವ ರಾಜೀವ್ ಚಂದ್ರಶೇಖರ್ ಅವರು ಸಲ್ಲಿಸಿದ ಅಫಿಡವಿಟ್‌ನಲ್ಲಿ ವಾಸ್ತವಿಕ ಮತ್ತು ಘೋಷಿತ ಆಸ್ತಿಯಲ್ಲಿ ಹೊಂದಾಣಿಕೆಯಾಗುತ್ತಿಲ್ಲ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಕಾರ್ಯವಿಧಾನದ ಪ್ರಕಾರ, ಚಂದ್ರಶೇಖರ್ ಅವರು ಸಲ್ಲಿಸಿದ ಅಫಿಡವಿಟ್ ವಿವರಗಳಲ್ಲಿ ಯಾವುದೇ ಹೊಂದಾಣಿಕೆಯಿಲ್ಲ. ಈ ಬಗ್ಗೆ ಪರಿಶೀಲಿಸುವಂತೆ CBDTಗೆ ಚುನಾವಣಾ ಆಯೋಗ ನಿರ್ದೇಶಿಸಿದೆ ಎಂದು ಮೂಲಗಳು ತಿಳಿಸಿವೆ.

ಅಫಿಡವಿಟ್‌ನಲ್ಲಿ ಯಾವುದೇ ತಪ್ಪು ಮಾಹಿತಿ ನೀಡಿದ್ದರೆ, 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 125 ಎ ಅಡಿಯಲ್ಲಿ ಅವರ ನಾಮಪತ್ರವನ್ನು ತಿರಸ್ಕರಿಸಲಾಗುತ್ತದೆ ಮತ್ತು ಕಾನೂನಿನ ಪ್ರಕಾರ, ನಾಮ ಪತ್ರಗಳಲ್ಲಿ ಅಥವಾ ಅಫಿಡವಿಟ್‌ನಲ್ಲಿ ಯಾವುದೇ ಮಾಹಿತಿ ಮರೆಮಾಚಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದಾಗಿದೆ.

ಜುಪಿಟರ್ ಕ್ಯಾಪಿಟಲ್ ಸೇರಿದಂತೆ ಅನೇಕ ಹೂಡಿಕೆಗಳ ಬಗ್ಗೆ ರಾಜೀವ್ ಚಂದ್ರಶೇಖರ್ ಅವರು ಅಫಿಡವಿಟ್‌ನಲ್ಲಿ ಯಾವುದೇ ಮಾಹಿತಿ ನೀಡಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

SCROLL FOR NEXT