ರಾಜ್ ಠಾಕ್ರೆ - ಅಮಿತ್ ಶಾ 
ದೇಶ

ಮೋದಿ, ಮಹಾ ಆಡಳಿತ ಮೈತ್ರಿಕೂಟಕ್ಕೆ ರಾಜ್ ಠಾಕ್ರೆ ಬೇಷರತ್ ಬೆಂಬಲ

ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ ಅವರು ಮಂಗಳವಾರ ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ, ಶಿವಸೇನೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಆಡಳಿತರೂಢ 'ಮಹಾಯುತಿ' ಮೈತ್ರಿಗೆ ಬೇಷರತ್ ಬೆಂಬಲ ನೀಡಿದ್ದಾರೆ.

ಮುಂಬೈ: ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಅಧ್ಯಕ್ಷ ರಾಜ್ ಠಾಕ್ರೆ ಅವರು ಮಂಗಳವಾರ ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ, ಶಿವಸೇನೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಆಡಳಿತರೂಢ 'ಮಹಾಯುತಿ' ಮೈತ್ರಿಗೆ ಬೇಷರತ್ ಬೆಂಬಲ ನೀಡಿದ್ದಾರೆ.

ಮುಂಬೈನಲ್ಲಿ ತಮ್ಮ ಪಕ್ಷದ ಗುಡಿ ಪಾಡ್ವಾ ರ್ಯಾಲಿಯಲ್ಲಿ ಮಾತನಾಡಿದ ರಾಜ್ ಠಾಕ್ರೆ, ಪ್ರಧಾನಿ ನರೇಂದ್ರ ಮೋದಿಯವರಿಗೆ ಬೆಂಬಲವನ್ನು ಘೋಷಿಸಿದರು ಮತ್ತು ಮುಂಬರುವ ಲೋಕಸಭೆ ಚುನಾವಣೆಯು 'ದೇಶದ ಭವಿಷ್ಯ'ವನ್ನು ನಿರ್ಧರಿಸುತ್ತದೆ ಎಂದರು.

ಇದೇ ವೇಳೆ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ತಯಾರಿ ಆರಂಭಿಸುವಂತೆ ರಾಜ್ ಠಾಕ್ರೆ ತಮ್ಮ ಪಕ್ಷದ ಕಾರ್ಯಕರ್ತರನ್ನು ಕರೆ ನೀಡಿದರು.

ಎಂಎನ್‌ಎಸ್ ಇನ್ನೂ ಲೋಕಸಭೆ ಚುನಾವಣೆಗೆ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.

MNS ಮುಖ್ಯಸ್ಥ ರಾಜ್ ಠಾಕ್ರೆ ಅವರು ಇತ್ತೀಚಿಗೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚಿಸಿದ್ದರು. ಇದೀಗ ಬೇಷರತ್ ಬೆಂಬಲ ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!