ಸುಪ್ರೀಂಕೋರ್ಟ್ 
ದೇಶ

ಮತಗಟ್ಟೆಗಳಲ್ಲಿ ಬ್ರೆತ್ ಅಲೈಸರ್ ಪರೀಕ್ಷೆ ಕೋರಿದ್ದ ಅರ್ಜಿ ವಜಾ: ಪ್ರಚಾರಕ್ಕಾಗಿ ಸಲ್ಲಿಸಲಾಗಿರುವ ಅರ್ಜಿ ಎಂದ ಸುಪ್ರೀಂ ಕೋರ್ಟ್

ಲೋಕಸಭೆ ಚುನಾವಣೆ ಮತದಾನದ ವೇಳೆ ಮತಗಟ್ಟೆಯ ಸರತಿ ಸಾಲಿನಲ್ಲಿ ಬ್ರೆತ್ ಅಲೈಸರ್ ಪರೀಕ್ಷೆ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾ ಮಾಡಿದೆ.

ನವದೆಹಲಿ: ಲೋಕಸಭೆ ಚುನಾವಣೆ ಮತದಾನದ ವೇಳೆ ಮತಗಟ್ಟೆಯ ಸರತಿ ಸಾಲಿನಲ್ಲಿ ಬ್ರೆತ್ ಅಲೈಸರ್ ಪರೀಕ್ಷೆ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾ ಮಾಡಿದೆ.

ನ್ಯಾಯಮೂರ್ತಿ ಸಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ನ್ಯಾಯಪೀಠವು, ಅರ್ಜಿ ವಜಾಗೊಳಿಸಿ, ಆಂಧ್ರ ಪ್ರದೇಶದ ಹೈಕೋರ್ಟ್ ನೀಡಿದ್ದ ಆದೇಶದ ವಿಷಯದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ. ಅಲ್ಲದೆ, ಪ್ರಚಾರದ ಹಿತಾಸಕ್ತಿಯಿಂದ ಸಲ್ಲಿಸಲಾಗಿರುವ ಅರ್ಜಿ ಇದಾಗಿದೆ ಎಂದು ಹೇಳಿದೆ.

ಏನಿದು? ಪ್ರಚಾರಕ್ಕಾಗಿ ಸಲ್ಲಿಸಿರುವ ಅರ್ಜಿಯೇ? ಚುನಾವಣೆ ದಿನ ಮದ್ಯ ಮಾರಾಟ ಇರುವುದಿಲ್ಲ. ಎಲ್ಲಾ ಕಡೆ ಪೊಲೀಸರ ನಿಯೋಜನೆ ಇರುತ್ತದೆ. ಇಂತಹ ಮನವಿಯನ್ನು ಯಾವುದೇ ಕಾರಣಕ್ಕೂ ಪುರಸ್ಕರಿಸುವುದಿಲ್ಲ ಎಂದು ಪೀಠ ಹೇಳಿದೆ.

ಈ ಸಂಬಂಧ ಜನವಾದಿ ಪಕ್ಷದ ಆಂಧ್ರಪ್ರದೇಶದ ಘಟಕವು ಹೈಕೋರ್ಟ್ ಮೆಟ್ಟಿಲೇರಿತ್ತು. ಹೈಕೋರ್ಟ್ ಅರ್ಜಿ ವಜಾಗೊಳಿಸಿದ ಬಳಿಕ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಲಾಗಿತ್ತು.

ಮತಗಟ್ಟೆಗೆ ಪ್ರವೇಶಿಸುವ ಪ್ರತಿಯೊಬ್ಬ ವ್ಯಕ್ತಿಯನ್ನು ಮೊದಲು ಉಸಿರಾಟದ ಪರೀಕ್ಷೆಗೆ ಒಳಪಡಿಸುವುದನ್ನು ಕಡ್ಡಾಯಗೊಳಿಸಲು ಚುನಾವಣಾ ಆಯೋಗಕ್ಕೆ ಸೂಚಿಸುವ ಯಾವುದೇ ನಿರ್ದಿಷ್ಟ ಕಾನೂನು ನಿಬಂಧನೆಗಳ ಬಗ್ಗೆ ಗಮನ ಸೆಳೆಯುವಲ್ಲಿ ಅರ್ಜಿದಾರರು ವಿಫಲರಾಗಿದ್ದಾರೆ ಎಂದು ಹೈಕೋರ್ಟ್ ಹೇಳಿತ್ತು.

ಯಾವುದೇ ವ್ಯಕ್ತಿ ಮದ್ಯದಿಂದ ಉತ್ತೇಜನಗೊಂಡು ಮತ ಹಾಕುವುದನ್ನು ತಡೆಯಲು ಮತಗಟ್ಟೆಗಳ ಪ್ರವೇಶ ದ್ವಾರದಲ್ಲಿ ಬ್ರೆತ್ ಅನಾಲೈಸರ್ ಪರೀಕ್ಷೆ ನಡೆಸಲು ಚುನಾವಣಾ ಆಯೋಗಕ್ಕೆ ಸೂಚಿಸಬೇಕೆಂದು ಅರ್ಜಿದಾರರು ಕೋರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

ಮೈಸೂರು ದಸರಾ ವೇದಿಕೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಎಡವಟ್ಟು; ಸಿಎಂ ಡಿಕೆಶಿ ಪತ್ನಿ ಹೆಸರು ಹೇಳುವಾಗ ಗೊಂದಲ! Video

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video