ಸಾಂದರ್ಭಿಕ ಚಿತ್ರ 
ದೇಶ

NCERT ಪುಸ್ತಕಗಳನ್ನು ಶಿಫಾರಸು ಮಾಡಿ, ಪಠ್ಯಕ್ರಮದಲ್ಲಿ ಏಕರೂಪತೆ ಇರಬೇಕು: ರಾಜ್ಯಗಳಿಗೆ NCPCR ಸೂಚನೆ

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಪ್ರಾಥಮಿಕ ಹಂತದಲ್ಲಿ ಎನ್‌ಸಿಇಆರ್‌ಟಿ ಪುಸ್ತಕಗಳನ್ನು ಮಾತ್ರ ಶಿಫಾರಸು ಮಾಡಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

ನವದೆಹಲಿ: ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ(ಎನ್‌ಸಿಪಿಸಿಆರ್‌) ಖಾಸಗಿ ಶಾಲೆಗಳಲ್ಲಿ ಶಿಕ್ಷಣದ ವೆಚ್ಚವನ್ನು ಕಡಿಮೆ ಮಾಡಲು ಮತ್ತು ಪ್ರಾಥಮಿಕ ಹಂತದಲ್ಲಿ ಎನ್‌ಸಿಇಆರ್‌ಟಿ ಪುಸ್ತಕಗಳನ್ನು ಮಾತ್ರ ಶಿಫಾರಸು ಮಾಡಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

ಶಾಲಾ ಶಿಕ್ಷಣದ ಎಲ್ಲಾ ಪ್ರಧಾನ ಕಾರ್ಯದರ್ಶಿಗಳು/ಕಾರ್ಯದರ್ಶಿಗಳಿಗೆ ಬರೆದ ಪತ್ರದಲ್ಲಿ, NCPCR ಅಧ್ಯಕ್ಷ, ಪ್ರಿಯಾಂಕ್ ಕಾನೂಂಗೊ ಅವರು ಖಾಸಗಿ ಪ್ರಕಾಶಕರು ಪ್ರಕಟಿಸಿದ ಪುಸ್ತಕಗಳಲ್ಲಿ ಪದೇ ಪದೇ ಬದಲಾವಣೆಯಾಗುತ್ತಿರುವುದು ಮಕ್ಕಳ ಗುಣಮಟ್ಟದ ಶಿಕ್ಷಣದ ಹಕ್ಕು ಮತ್ತು RTE ಕಾಯಿದೆ, 2009 ರ ಸ್ಪಷ್ಟ ಉಲ್ಲಂಘನೆ ಎಂದು ಹೇಳಿದ್ದಾರೆ.

ಎನ್‌ಸಿಪಿಸಿಆರ್ ಮುಖ್ಯಸ್ಥರು, ತಮ್ಮ ಪತ್ರ ತಲುಪಿದ 30 ದಿನಗಳಲ್ಲಿ ಅನುಸರಣೆ ವರದಿಯನ್ನು ಸಲ್ಲಿಸುವಂತೆ ರಾಜ್ಯಗಳಿಗೆ ಕೇಳಿಕೊಂಡಿದ್ದಾರೆ.

ಈ ಹಿಂದೆ 2019 ರಲ್ಲಿ ಮತ್ತು ಕಳೆದ ವರ್ಷ ಮಾರ್ಚ್‌ನಲ್ಲಿ ರಾಜ್ಯಗಳಿಗೆ ಪತ್ರ ಬರೆದಿದ್ದ ಎನ್‌ಸಿಪಿಸಿಆರ್, ಮಕ್ಕಳಿಗೆ ಸಮಾನ ಗುಣಮಟ್ಟದ ಶಿಕ್ಷಣದ ಹಕ್ಕನ್ನು ನೀಡುವ 2009 ರ ಶಿಕ್ಷಣ ಹಕ್ಕು ಕಾಯ್ದೆಯ ಸೆಕ್ಷನ್ 29 ರ ಅನುಷ್ಠಾನದಲ್ಲಿ ಏಕರೂಪತೆ ಇರಬೇಕು ಎಂದು ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT