ಚಿರಾಗ್ ಆಂಟಿಲ್ 
ದೇಶ

ಕೆನಡಾ: ಭಾರತ ಮೂಲದ 24 ವರ್ಷದ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ, ಕಾರಿನೊಳಗೆ ಶವವಾಗಿ ಪತ್ತೆ!

ಕೆನಡಾದ ದಕ್ಷಿಣ ವ್ಯಾಂಕೋವರ್‌ನಲ್ಲಿ ಭಾರತ ಮೂಲಕ 24 ವರ್ಷದ ವಿದ್ಯಾರ್ಥಿಯೊಬ್ಬನಿಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಕಾರಿನೊಳಗೆ ಶವ ಪತ್ತೆಯಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ಕೆನಡಾದ ದಕ್ಷಿಣ ವ್ಯಾಂಕೋವರ್‌ನಲ್ಲಿ ಭಾರತ ಮೂಲಕ 24 ವರ್ಷದ ವಿದ್ಯಾರ್ಥಿಯೊಬ್ಬನಿಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಕಾರಿನೊಳಗೆ ಶವ ಪತ್ತೆಯಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

24 ವರ್ಷದ ಚಿರಾಗ್ ಆಂಟಿಲ್ ಎಂಬಾತ ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದು, ಸ್ಥಳೀಯರು ಗುಂಡೇಟಿನ ಶಬ್ದ ಕೇಳಿದ್ದಾಗಿ ವರದಿಯಾಗಿದೆ ಎಂದು ವ್ಯಾಂಕೋವರ್ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಗರದಲ್ಲಿ ನಡೆದಿರುವ ಈ ಹತ್ಯೆಯ ಕುರಿತು ತನಿಖೆ ನಡೆಸುತ್ತಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

'ಏಪ್ರಿಲ್ 12 ರಂದು ರಾತ್ರಿ 11 ಗಂಟೆಯ ಸುಮಾರಿಗೆ ಪೂರ್ವ 55ನೇ ಅವೆನ್ಯೂ ಮತ್ತು ಮುಖ್ಯ ರಸ್ತೆಯಲ್ಲಿ ಸ್ಥಳೀಯ ನಿವಾಸಿಗಳು ಗುಂಡಿನ ಶಬ್ದವನ್ನು ಕೇಳಿದ್ದಾರೆ. ನಂತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ 24 ವರ್ಷದ ಚಿರಾಗ್ ಆಂಟಿಲ್ ಎಂಬಾತ ಕಾರಿನೊಳಗೆ ಮೃತಪಟ್ಟಿರುವುದು ಕಂಡುಬಂದಿದೆ. ಈ ಸಂಬಂಧ ಯಾರನ್ನೂ ಬಂಧಿಸಿಲ್ಲ ಮತ್ತು ಮುಂದಿನ ತನಿಖೆ ನಡೆಯುತ್ತಿದೆ ಎಂದರು.

ಶನಿವಾರ ಸಂಜೆ, ವ್ಯಾಂಕೋವರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಎಕ್ಸ್‌ನಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, 'ವ್ಯಾಂಕೋವರ್‌ನಲ್ಲಿ ವಾಸಿಸುವ ಭಾರತೀಯ ಪ್ರಜೆ ಚಿರಾಗ್ ಆಂಟಿಲ್ ಅವರನ್ನು ಗುಂಡಿಕ್ಕಿ ಕೊಂದಿರುವುದು ಬಹಳ ದುಃಖದ ಸಂಗತಿಯಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಮಾಹಿತಿಗಾಗಿ ರಾಯಭಾರ ಕಚೇರಿಯು ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿದೆ' ಎಂದು ಹೇಳಿದೆ.

ಹರಿಯಾಣ ಮೂಲದ ಚಿರಾಗ್ 2022ರಲ್ಲಿ ವ್ಯಾಂಕೋವರ್‌ಗೆ ಹೋಗಿದ್ದರು ಮತ್ತು ಅಂದಿನಿಂದ ಅಲ್ಲಿ ಕೆಲಸ ಮಾಡುತ್ತಿದ್ದರು. ಅವರ ಪಾರ್ಥೀವ ಶರೀರವನ್ನು ಭಾರತಕ್ಕೆ ತರಲು ಚಿರಾಗ್ ಆಂಟಿಲ್ ಅವರ ಕುಟುಂಬವು ಕ್ರೌಡ್ ಫಂಡಿಂಗ್ ಪ್ಲಾಟ್‌ಫಾರ್ಮ್ GoFundMe ಮೂಲಕ ಹಣವನ್ನು ಸಂಗ್ರಹಿಸುತ್ತಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ