ಅಮಿತ್ ಶಾ 
ದೇಶ

ಬಿಜೆಪಿ ಎಂದಿಗೂ ಮೀಸಲಾತಿ ರದ್ದು ಮಾಡಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳನ್ನು ಗೆದ್ದರೆ ಮೀಸಲಾತಿಯನ್ನು ರದ್ದುಗೊಳಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

ಭಂಡಾರಾ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನಗಳನ್ನು ಗೆದ್ದರೆ ಮೀಸಲಾತಿಯನ್ನು ರದ್ದುಗೊಳಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

ಭಂಡಾರಾ ಜಿಲ್ಲೆಯ ಸಾಕೋಲಿಯಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅಮಿತ್ ಶಾ, ಕಾಂಗ್ರೆಸ್ ಈ ಗೊಂದಲವನ್ನು ಹರಡುತ್ತಿದೆ. ಬಿಜೆಪಿ ಎಂದಿಗೂ ಮೀಸಲಾತಿಯನ್ನು ರದ್ದುಗೊಳಿಸುವುದಿಲ್ಲ. ನಮಗೆ ಈಗ ಬಹುಮತವಿದ್ದು, ಮೀಸಲಾತಿ ವಿಚಾರದಲ್ಲಿ ತಲೆಕೆಡಿಸಿಕೊಂಡಿಲ್ಲ.ಈಗ 370 ನೇ ವಿಧಿಯನ್ನು ರದ್ದುಗೊಳಿಸಿದ್ದೇವೆ ಮತ್ತು ತ್ರಿವಳಿ ತಲಾಖ್ ಕೊನೆಗೊಳಿಸಿದ್ದೇವೆ ಆದರೆ ಮೀಸಲಾತಿಯನ್ನು ರದ್ದುಗೊಳಿಸಲಿಲ್ಲ. ಮೀಸಲಾತಿಯನ್ನು ರದ್ದುಗೊಳಿಸುವುದಿಲ್ಲ ಎಂಬುದು ನರೇಂದ್ರ ಮೋದಿಯವರ ಗ್ಯಾರಂಟಿಯಾಗಿದೆ ಎಂದರು.

"70 ವರ್ಷಗಳಲ್ಲಿ ಕಾಂಗ್ರೆಸ್ 370 ನೇ ವಿಧಿಯನ್ನು ರದ್ದುಗೊಳಿಸಲಿಲ್ಲ. ಆದರೆ ನಾವು ಅದನ್ನು ತೆಗೆದು ಕಾಶ್ಮೀರವನ್ನು ಮುಖ್ಯವಾಹಿನಿಗೆ ತಂದಿದ್ದೇವೆ. ರಾಮಮಂದಿರ ವಿಚಾರವನ್ನು ಕಾಂಗ್ರೆಸ್‌ ವರ್ಷಗಳ ಕಾಲ ಎಳೆದಾಡುತ್ತಾ ಬಂದಿತ್ತು. ರಾಮಮಂದಿರ ನಿರ್ಮಾಣದ ಭರವಸೆಯನ್ನೂ ಮೋದಿ ಈಡೇರಿಸಿದ್ದಾರೆ. ಏಕರೂಪ ನಾಗರಿಕ ಸಂಹಿತೆ, 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರಿಗೆ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ, ಮನೆಗಳಿಗೆ ಅನಿಲ ಸಂಪರ್ಕ, ಬಡವರ ಮನೆಗಳಿಗೆ ಉಚಿತ ವಿದ್ಯುತ್ ಭರವಸೆಯನ್ನು ಬಿಜೆಪಿ ಈಡೇರಿಸಲು ಜನರು ಮೂರನೇ ಅವಧಿಗೆ ಪ್ರಧಾನಿ ಮೋದಿಯನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.

ಕಾಂಗ್ರೆಸ್ ಐದು ದಶಕಗಳ ಕಾಲ ಅಧಿಕಾರದಲ್ಲಿದ್ದರೂ ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ ಮತ್ತು ಅವರನ್ನು ನಿರಂತರವಾಗಿ ಅವಮಾನಿಸಿತು. ಬಾಬಾಸಾಹೇಬರಿಗೆ ಸಂಬಂಧಿಸಿದ ಐದು ಸ್ಥಳಗಳಿಗೂ ಬಿಜೆಪಿ ಸರಕಾರ ಪಾವಿತ್ರ್ಯತೆ ನೀಡಿದೆ ಎಂದು ಅಮಿತ್ ಶಾ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT