ಸಲ್ಮಾನ್ ಖಾನ್  
ದೇಶ

ನಟ ಸಲ್ಮಾನ್ ಖಾನ್ ನಿವಾಸ ಎದುರು ಗುಂಡಿನ ದಾಳಿ: ಪೊಲೀಸರಿಂದ ತೀವ್ರ ತನಿಖೆ

ಬಾಲಿವುಡ್ ನ ಖ್ಯಾತ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಇಂದು ಭಾನುವಾರ ಮುಂಜಾನೆ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂಬೈ: ಬಾಲಿವುಡ್ ನ ಖ್ಯಾತ ನಟ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಇಂದು ಭಾನುವಾರ ಮುಂಜಾನೆ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ನಿವಾಸದ ಹೊರಗೆ ಮೋಟಾರ್‌ಸೈಕಲ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಗಾಳಿಯಲ್ಲಿ ಹಲವಾರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.

ಮುಂಬೈ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಗುಂಡು ಹಾರಿಸಿದ ವ್ಯಕ್ತಿಯನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ.

ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೊಯ್ ಹತ್ಯೆ ಮಾಡಬೇಕೆಂದು ಯೋಜನೆ ರೂಪಿಸಿದ್ದ ಪ್ರಮುಖ 10 ವ್ಯಕ್ತಿಗಳಲ್ಲಿ ನಟ ಸನ್ಮಾನ್ ಖಾನ್ ಕೂಡ ಸೇರಿದ್ದಾರೆ ಎಂದು ಕಳೆದ ವರ್ಷ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಬಹಿರಂಗಪಡಿಸಿತ್ತು. ಸಲ್ಮಾನ್ ಖಾನ್ ಅವರ ಕುಖ್ಯಾತ 1998 ರ ಕೃಷ್ಣಮೃಗ ಬೇಟೆಯ ಪ್ರಕರಣ ಉಲ್ಲೇಖಿಸಿ, ಇದು ದರೋಡೆಕೋರನ ಪ್ರಕಾರ, ಬಿಷ್ಣೋಯ್ ಸಮುದಾಯ ಮೇಲೆ ನಟ ಎಸಗಿದ ಅಪರಾಧವಾಗಿದೆ.

ಬಿಷ್ಣೋಯ್ ತನ್ನ ಸಹಾಯಕನಾದ ಸಂಪತ್ ನೆಹ್ರಾ ಮೂಲಕ ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾನೆ ಎಂದು ತನಿಖೆಯಿಂದ ಬಹಿರಂಗವಾಗಿತ್ತು, ಸಂಪತ್ ನೆಹ್ರಾನನ್ನು ಹರಿಯಾಣ ಪೊಲೀಸರ ವಿಶೇಷ ಕಾರ್ಯಪಡೆ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿತ್ತು.

ಕಳೆದ ವರ್ಷ ಏಪ್ರಿಲ್ 11 ರಂದು ಬಂದ ಮತ್ತೊಂದು ಬೆದರಿಕೆ ಕರೆ ನಂತರ ಮುಂಬೈ ಪೊಲೀಸರು ಸನ್ಮಾನ್ ಖಾನ್ ಅವರಿಗೆ Y+ ಯನ್ನು ನೀಡಿದ್ದರು. ಸನ್ಮಾನ್ ಖಾನ್ ಗೆ ಬೆದರಿಕೆ ಇಮೇಲ್ ಕಳುಹಿಸಿದ್ದಕ್ಕಾಗಿ ಯುನೈಟೆಡ್ ಕಿಂಗ್‌ಡಂನಲ್ಲಿರುವ ಭಾರತೀಯ ವಿದ್ಯಾರ್ಥಿಯ ವಿರುದ್ಧ ಲುಕ್‌ಔಟ್ ಸುತ್ತೋಲೆ (LOC) ಹೊರಡಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ