ಪವನ್ ಕಲ್ಯಾಣ್, ಚಂದ್ರಬಾಬು ನಾಯ್ಡು
ಪವನ್ ಕಲ್ಯಾಣ್, ಚಂದ್ರಬಾಬು ನಾಯ್ಡು 
ದೇಶ

ಸಿಎಂ ಜಗನ್ ಮೇಲೆ ಹಲ್ಲೆ ಪ್ರಕರಣ: ನಾಯ್ಡು, ಪವನ್ ಕಲ್ಯಾಣ್ ವಿರುದ್ಧ YSRP ದೂರು

Nagaraja AB

ಅಮರಾವತಿ: ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಮೇಲೆ ಹಲ್ಲೆ ನಂತರ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ವೈಎಸ್ ಆರ್ ಪಿ ದೂರು ನೀಡಿದೆ.

ವೈಎಸ್‌ಆರ್‌ಸಿಪಿ ಪ್ರಧಾನ ಕಾರ್ಯದರ್ಶಿ ಸಜ್ಜಲ ರಾಮಕೃಷ್ಣ ರೆಡ್ಡಿ ಮಾತನಾಡಿ, ಸಿಎಂ ಜಗನ್‌ ಮೇಲಿನ ದಾಳಿಯ ಹಿಂದೆ ಪಿತೂರಿ ಇದೆ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಚಂದ್ರಬಾಬು ಮತ್ತು ಪವನ್ ಕಲ್ಯಾಣ್ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡದಂತೆ ತಡೆಯಬೇಕು, ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಆಯೋಗವನ್ನು ಒತ್ತಾಯಿಸಿರುವುದಾಗಿ ತಿಳಿಸಿದರು.

ಇದೇ ವೇಳೆ, ಸಿಎಂ ಜಗನ್ ಮೇಲಿನ ಹಲ್ಲೆಯನ್ನು ಖಂಡಿಸಿ ರಾಜ್ಯ ಕೈಗಾರಿಕಾ ಸಚಿವ ಹಾಗೂ ಗಜುವಾಕ ಕ್ಷೇತ್ರದ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್) ಅಭ್ಯರ್ಥಿ ಗುಡಿವಾಡ ಅಮರನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯದಲ್ಲಿ ಹೆಚ್ಚುತ್ತಿರುವ ಜನಪ್ರಿಯತೆಯಿಂದಾಗಿ ಜಗನ್ಮೋಹನ್ ರೆಡ್ಡಿ ಅವರ ಹಲ್ಲೆ ನಡೆದಿದೆ ಎಂದು ತೆಲುಗು ದೇಶಂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಚಂದ್ರಬಾಬು ನಾಯ್ಡು ಮತ್ತು ಇತರ ಮುಖಂಡರು ವಿರುದ್ಧ ವಾಗ್ದಾಳಿ ನಡೆಸಿದರು.

ಶನಿವಾರ ಸಂಜೆ, ವಿಜಯವಾಡದಲ್ಲಿ 'ಮೇಮಂತ ಸಿದ್ದಂ' ಬಸ್ ಯಾತ್ರೆಯ ವೇಳೆ ಅಪರಿಚಿತ ವ್ಯಕ್ತಿಯೊಬ್ಬರು ಮುಖ್ಯಮಂತ್ರಿಯ ಮೇಲೆ ಕಲ್ಲು ತೂರಾಟ ನಡೆಸಿದ ನಂತರ, ಸಿಎಂ ಜಗನ್ ಅವರ ಕಣ್ಣಿನ ಮೇಲ್ಬಾಗದಲ್ಲಿ ಗಾಯವಾಗಿತ್ತು.

ಸಿಎಂಗೆ ತಕ್ಷಣವೇ ಬಸ್‌ನಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ ಸಿಎಂ ಜಗನ್ ತಮ್ಮ ಬಸ್ ಪ್ರಯಾಣವನ್ನು ಮುಂದುವರೆಸಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಿಎಂ ಜಗನ್ ಮೋಹನ್ ರೆಡ್ಡಿ ಮೇಲಿನ ದಾಳಿಯನ್ನು ಚಂದ್ರಬಾಬು ನಾಯ್ಡು ಖಂಡಿಸಿದ್ದಾರೆ ಮತ್ತು ಘಟನೆಯ ಬಗ್ಗೆ "ನಿಷ್ಪಕ್ಷಪಾತ" ತನಿಖೆಗಾಗಿ ಭಾರತ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

SCROLL FOR NEXT