ದೇಶ

ಪತಂಜಲಿ ದಾರಿ ತಪ್ಪಿಸುವ ಜಾಹೀರಾತು: ಸಾರ್ವಜನಿಕವಾಗಿ ಕ್ಷಮೆಕೋರಲು ಬಾಬಾ ರಾಮ್‌ದೇವ್, ಬಾಲಕೃಷ್ಣ ಮುಂದು

Sumana Upadhyaya

ನವದೆಹಲಿ: ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಾವು ತಪ್ಪಿತಸ್ಥರಾಗಿದ್ದೇವೆ ಎಂದು ಯೋಗ ಗುರು ಬಾಬಾ ರಾಮ್‌ದೇವ್ ಮತ್ತು ಅವರ ಸಹವರ್ತಿ ಆಚಾರ್ಯ ಬಾಲಕೃಷ್ಣ ಅವರು ಮಂಗಳವಾರ ಕೈಜೋಡಿಸಿ ಬೇಷರತ್ ಕ್ಷಮೆಯಾಚಿಸಿದ್ದಾರೆ ಮತ್ತು ತಾವು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ ತಪ್ಪಿತಸ್ಥರು ಎಂದು ಒಪ್ಪಿಕೊಂಡಿದ್ದಾರೆ.

ಜನರನ್ನು ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಮಾಧ್ಯಮಗಳ ಮುಂದೆ ಬಂದು ಸಾರ್ವಜನಿಕ ಕ್ಷಮೆಯಾಚನೆಗೆ ಅವಕಾಶ ನೀಡಬೇಕೆಂದು ಇಬ್ಬರೂ ಸುಪ್ರೀಂ ಕೋರ್ಟ್ ಮುಂದೆ ಮನವಿ ಮಾಡಿಕೊಂಡಿದ್ದಾರೆ.

ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ಆದಾಗ್ಯೂ, ಆಪಾದಿತ ಅಪರಾಧಿಗಳಿಗೆ (ರಾಮ್‌ದೇವ್ ಮತ್ತು ಬಾಲಕೃಷ್ಣ) ಕ್ಷಮೆಯನ್ನು ನೀಡಲಾಗುತ್ತದೆಯೇ ಅಥವಾ ಇಲ್ಲವೇ ಎಂದು ಇನ್ನೂ ನಿರ್ಧರಿಸಿಲ್ಲ ಎಂದು ಸ್ಪಷ್ಟಪಡಿಸಿದೆ.

ಮುಂದಿನ ವಿಚಾರಣೆಯನ್ನು ಏಪ್ರಿಲ್ 23 ರಂದು ನಡೆಸಲಾಗುವುದು ಎಂದು ನ್ಯಾಯಮೂರ್ತಿ ಕೊಹ್ಲಿ ಹೇಳಿದರು. ಮುಂದಿನ ವಿಚಾರಣೆಯ ದಿನಾಂಕದಂದು ತಮ್ಮ ಮುಂದೆ ಹಾಜರಾಗುವಂತೆ ರಾಮ್‌ದೇವ್ ಮತ್ತು ಬಾಲಕೃಷ್ಣ ಇಬ್ಬರಿಗೂ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತು ಮತ್ತು ತಮ್ಮನ್ನು ತಾವು ಪ್ರಕರಣದಿಂದ ಮುಕ್ತ ಮಾಡಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಅವರಿಗೆ ಅವಕಾಶ ನೀಡಿತು.

ಪತಂಜಲಿ ಆಯುರ್ವೇದದ ಜಾಹೀರಾತುಗಳು ಸುಳ್ಳಾಗಿವೆ ಎಂದು ಆರೋಪಿಸಿ ಭಾರತೀಯ ವೈದ್ಯಕೀಯ ಸಂಘ (IMA) ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ, ಪತಂಜಲಿ ಉತ್ಪನ್ನಗಳು ಕೆಲವು ರೋಗಗಳನ್ನು ಗುಣಪಡಿಸುತ್ತದೆ ಎಂದು ಹೇಳುತ್ತದೆ; ರಕ್ತದೊತ್ತಡ, ಮಧುಮೇಹ ಮತ್ತು ಅಸ್ತಮಾದಂತಹ ಕಾಯಿಲೆಗಳ ಬಗ್ಗೆ ಜಾಹೀರಾತು ನೀಡುವುದು ಮತ್ತು ಅಂತಹ ಕಾಯಿಲೆಗಳನ್ನು ಗುಣಪಡಿಸುವುದು ಸಂಪೂರ್ಣವಾಗಿ ತಪ್ಪು ಎಂದು ಐಎಂಎ ವಾದಿಸಿದೆ.

SCROLL FOR NEXT