ಶಿವಸೇನೆ(ಯುಬಿಟಿ) ಚಿಹ್ನೆ ಬಿಡುಗಡೆ 
ದೇಶ

ಉದ್ಧವ್ ಶಿವಸೇನೆ ಚಿಹ್ನೆ ಬಿಡುಗಡೆ: 'ಉರಿಯುವ ಜ್ಯೋತಿ' ನಿರಂಕುಶ ಆಡಳಿತವನ್ನು ಸುಟ್ಟು ಬೂದಿ ಮಾಡಲಿದೆ!

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ತಮ್ಮ ಪಕ್ಷದ ಚುನಾವಣಾ ಚಿಹ್ನೆ 'ಉರಿಯುವ ಜ್ಯೋತಿ' ನಿರಂಕುಶ ಆಡಳಿತವನ್ನು ಸುಟ್ಟು ಬೂದಿ ಮಾಡಲಿದೆ ಎಂದಿದ್ದಾರೆ.

ಮುಂಬೈ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ತಮ್ಮ ಪಕ್ಷದ ಚುನಾವಣಾ ಚಿಹ್ನೆ 'ಉರಿಯುವ ಜ್ಯೋತಿ' ದೇಶದಲ್ಲಿನ ನಿರಂಕುಶ ಆಡಳಿತವನ್ನು ಸುಟ್ಟು ಬೂದಿ ಮಾಡಲಿದೆ ಎಂದು ಮಂಗಳವಾರ ಹೇಳಿದ್ದಾರೆ.

ಪಕ್ಷದ ಚುನಾವಣಾ ಚಿಹ್ನೆ ಮತ್ತು ಅದನ್ನು ಪ್ರಚಾರ ಮಾಡಲು ಹಾಡನ್ನು ಬಿಡುಗಡೆ ಮಾಡಿದ ನಂತರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಠಾಕ್ರೆ, ಸೇನೆ(ಯುಬಿಟಿ), ಎನ್‌ಸಿಪಿ (ಶರದ್ಚಂದ್ರ ಪವಾರ್) ಮತ್ತು ಕಾಂಗ್ರೆಸ್ ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ (ಎಂವಿಎ) ಪಕ್ಷಗಳ ಜಂಟಿ ಪ್ರಣಾಳಿಕೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಕಾಂಗ್ರೆಸ್ ಈಗಾಗಲೇ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಮಹಾರಾಷ್ಟ್ರಕ್ಕೆ ಸಂಬಂಧಿಸಿದ ಅಂಶಗಳನ್ನು ಎಂವಿಎ ಜಂಟಿ ಪ್ರಣಾಳಿಕೆಯಲ್ಲಿ ಅಳವಡಿಸಲಾಗುವುದು ಎಂದು ಅವರು ತಿಳಿಸಿದರು.

"ಉರಿಯುವ ಜ್ಯೋತಿ ಚಿಹ್ನೆಯು ಮಹಾರಾಷ್ಟ್ರದ ಮೂಲೆ ಮೂಲೆಗಳನ್ನು ತಲುಪಿದೆ. ಈಗ, ಉರಿಯುವ ಜ್ಯೋತಿಯು ನಿರಂಕುಶ ಆಡಳಿತವನ್ನು ಸುಟ್ಟು ಬೂದಿ ಮಾಡಲಿದೆ" ಎಂದು ಠಾಕ್ರೆ ಹೇಳಿದರು.

ಕಳೆದ ವರ್ಷ, ಶಿವಸೇನೆ(ಯುಬಿಟಿ) ಅಂಧೇರಿ ಉಪಚುನಾವಣೆಯಲ್ಲಿ ಉರಿಯುತ್ತಿರುವ ಜೋತಿ ಚಿಹ್ನೆಯನ್ನು ಬಳಸಿಕೊಂಡು ಗೆದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್