ನಾಮಪತ್ರ ಸಲ್ಲಿಸಿದ ಅಮಿತ್ ಶಾ 
ದೇಶ

ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಅಮಿತ್ ಶಾ ನಾಮಪತ್ರ ಸಲ್ಲಿಕೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ(ಬಿಜೆಪಿ)ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.

ಗಾಂಧಿನಗರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ(ಬಿಜೆಪಿ)ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು.

'ವಿಜಯ್ ಮುಹೂರ್ತ' ಎಂದು ಪರಿಗಣಿಸಲಾದ ಇಂದು ಮಧ್ಯಾಹ್ನ 12.39ಕ್ಕೆ ಗಾಂಧಿನಗರ ಕಲೆಕ್ಟರ್ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಅಮಿತ್ ಶಾ ನಾಮಪತ್ರ ಸಲ್ಲಿಸಿದರು. ಅಮಿತ್ ಶಾ ಅವರೊಂದಿಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಇದ್ದರು.

ಬಿಜೆಪಿ ಮಾಜಿ ಅಧ್ಯಕ್ಷ ಅಮಿತ್ ಶಾ ಅವರು ಕಳೆದ 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಗಾಂಧಿನಗರ ಕ್ಷೇತ್ರದಿಂದ 5 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಗುಜರಾತ್‌ನ ಎಲ್ಲಾ 26 ಲೋಕಸಭಾ ಸ್ಥಾನಗಳಿಗೆ ಮೇ 7 ರಂದು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್