ಸಂಗ್ರಹ ಚಿತ್ರ 
ದೇಶ

ಲೋಕಸಭೆ ಚುನಾವಣೆ: ಮೊದಲ ಹಂತದಲ್ಲಿ ದೇಶಾದ್ಯಂತ 64ರಷ್ಟು, ತಮಿಳುನಾಡಿನಲ್ಲಿ ದಾಖಲೆಯ 72ರಷ್ಟು ಮತದಾನ

ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ 21 ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 102 ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯಗೊಂಡಿದ್ದು. ಬಹುತೇಕ ಶಾಂತಿಯುತವಾಗಿ ಮತದಾನ ನಡೆದಿದ್ದು ವಿವಿಧ ರಾಜ್ಯಗಳ 102 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 63.7ರಷ್ಟು ಹಾಗೂ ತಮಿಳುನಾಡಿನಲ್ಲಿ 72ರಷ್ಟು ಮತದಾನವಾಗಿದೆ.

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ 21 ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 102 ಕ್ಷೇತ್ರಗಳಲ್ಲಿ ಮತದಾನ ಮುಕ್ತಾಯಗೊಂಡಿದ್ದು. ಬಹುತೇಕ ಶಾಂತಿಯುತವಾಗಿ ಮತದಾನ ನಡೆದಿದ್ದು ವಿವಿಧ ರಾಜ್ಯಗಳ 102 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 63.7ರಷ್ಟು ಹಾಗೂ ತಮಿಳುನಾಡಿನಲ್ಲಿ 72ರಷ್ಟು ಮತದಾನವಾಗಿದೆ.

ಮೊದಲ ಹಂತದಲ್ಲಿ ತಮಿಳುನಾಡಿನ ಎಲ್ಲಾ 39 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆದಿದ್ದು ದಾಖಲೆಯ ಶೇ.72ರಷ್ಟು ಮತದಾನವಾಗಿದೆ. ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಮತದಾನವಾಗಿದ್ದು, ಶೇ. 77.57 ರಷ್ಟು ವೋಟಿಂಗ್ ಆಗಿದೆ. ರಾಜಸ್ಥಾನದಲ್ಲಿ ಶೇ.50.3, ಉತ್ತರ ಪ್ರದೇಶದಲ್ಲಿ ಶೇ.59.5 ಮತ್ತು ಮಧ್ಯಪ್ರದೇಶದಲ್ಲಿ ಶೇ.66.7ರಷ್ಟು ಮತದಾನವಾಗಿದೆ.

ರಾಜಸ್ಥಾನ (12), ಉತ್ತರ ಪ್ರದೇಶ (8), ಮಧ್ಯಪ್ರದೇಶ (6), ಉತ್ತರಾಖಂಡ (5), ಅರುಣಾಚಲ ಪ್ರದೇಶ (2), ಮೇಘಾಲಯ (2), ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು (1), ಮಿಜೋರಾಂ (1) ), ನಾಗಾಲ್ಯಾಂಡ್ (1), ಪುದುಚೇರಿ (1), ಸಿಕ್ಕಿಂ (1) ಮತ್ತು ಲಕ್ಷದ್ವೀಪ (1). ಅಲ್ಲದೆ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5, ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಮಣಿಪುರದಲ್ಲಿ ಎರಡು ಮತ್ತು ತ್ರಿಪುರಾ, ಜಮ್ಮು ಮತ್ತು ಕಾಶ್ಮೀರ ಮತ್ತು ಛತ್ತೀಸ್‌ಗಢದಲ್ಲಿ ತಲಾ 1 ಸ್ಥಾನಗಳಲ್ಲಿ ಚುನಾವಣೆ ನಡೆದಿದೆ.

ಲೋಕಸಭಾ ಚುನಾವಣೆಯ ಜೊತೆಗೆ ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯಲ್ಲಿ ಕ್ರಮವಾಗಿ 75.3ರಷ್ಟು ಮತ್ತು 70.1ರಷ್ಟು ಮತದಾನವಾಗಿದೆ.

ಮೊದಲ ಹಂತದಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಕಿರಣ್ ರಿಜಿಜು ಮತ್ತು ಅರ್ಜುನ್ ರಾಮ್ ಮೇಘವಾಲ್ ಅವರು ಸೇರಿದಂತೆ 102 ಕ್ಷೇತ್ರಗಳ ಒಟ್ಟು 1,625 ಅಭ್ಯರ್ಥಿಗಳ ಭವಿಷ್ಯ ಇವಿಎಂ ಸೇರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್