ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ಕೇಜ್ರಿವಾಲ್ ಆರೋಗ್ಯ ತಪಾಸಣೆಗೆ ವೈದ್ಯಕೀಯ ಸಲಹಾ ತಂಡ ರಚಿಸುವಂತೆ AIIMSಗೆ ಕೋರ್ಟ್ ಸೂಚನೆ

Lingaraj Badiger

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಶುಗರ್ ಪ್ರಮಾಣವನ್ನು ನಿಯಂತ್ರಿಸಲು ಇನ್ಸುಲಿನ್ ಅಗತ್ಯವಿದೆಯೇ ಎಂದು ನಿರ್ಧರಿಸಲು ಮತ್ತು ಅವರ ಇತರ ವೈದ್ಯಕೀಯ ಸಮಸ್ಯೆಗಳ ಬಗ್ಗೆ ತಪಾಸಣೆ ನಡೆಸಲು ವೈದ್ಯಕೀಯ ಸಲಹಾ ತಂಡ ರಚಿಸುವಂತೆ ದೆಹಲಿ ನ್ಯಾಯಾಲಯವು ಸೋಮವಾರ ಏಮ್ಸ್‌ಗೆ ನಿರ್ದೇಶನ ನೀಡಿದೆ.

ಸಿಬಿಐ ಮತ್ತು ಇಡಿ ಪ್ರಕರಣಗಳ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಈ ಆದೇಶ ನೀಡಿದ್ದು, ತಮ್ಮ ವೈದ್ಯರೊಂದಿಗೆ ವಿಡಿಯೋ ಸಮಾಲೋಚನೆಗೆ ಅವಕಾಶ ನೀಡಬೇಕು ಎಂಬ ಕೇಜ್ರಿವಾಲ್ ಅವರ ಮನವಿಯನ್ನು ತಿರಸ್ಕರಿಸಿದ್ದಾರೆ.

ಕೇಜ್ರಿವಾಲ್ ಅವರಿಗೆ ಚಿಕಿತ್ಸೆ ನೀಡುವ ಸಂಬಂಧ ವೈದ್ಯಕೀಯ ತಲಹಾ ತಂಡ ರಚಿಸುವಂತೆ ಸೂಚನೆ ನೀಡಿದ್ದು, ಈ ತಂಡದಲ್ಲಿ ತಜ್ಞ ವೈದ್ಯರು ಇರಬೇಕು ಎಂದು ಹೇಳಿದೆ. ಈ ತಂಡವು ಕೇಜ್ರಿವಾಲ್ ಅವರಿಗೆ ಪ್ರತಿ ದಿನ ಇನ್ಸುಲಿನ್ ನೀಡಬೇಕೇ? ಬೇಡವೇ? ಅನ್ನೋದನ್ನ ನಿರ್ಧರಿಸಲಿ ಎಂದೂ ನ್ಯಾಯಾಲಯ ಹೇಳಿದೆ.

ಕೇಜ್ರಿವಾಲ್ ಅವರು ತಮಗೆ ಜೈಲಿನಲ್ಲಿ ಇನ್ಸುಲಿನ್ ನೀಡುತ್ತಿಲ್ಲ. ಇದರಿಂದಾಗಿ ತಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣ "ಗಾಬರಿಗೊಳಿಸುವ" ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಶುಕ್ರವಾರ ಆರೋಪಿಸಿದ್ದರು.

SCROLL FOR NEXT