ಬಾಬಾ ರಾಮ್ ದೇವ್ PTI
ದೇಶ

Patanjali Case: ಬಾಬಾ ರಾಮ್ ದೇವ್ ಕ್ಷಮೆ ಯಾಚಿಸಿದ ಜಾಹಿರಾತುಗಳನ್ನು ಕಡತಕ್ಕೆ ಸೇರಿಸಿ- ಸುಪ್ರೀಂ ಕೋರ್ಟ್!

ಪತಂಜಲಿ ಸಂಸ್ಥೆಯ ಹಾದಿ ತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮುಖ್ಯಸ್ಥರಾದ ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ ಕ್ಷಮೆ ಯಾಚನೆ ಪತ್ರದ ಜಾಹಿರಾತನ್ನು ಕಡತಗಳಿಗೆ ಸೇರಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚನೆ ನೀಡಿದೆ.

ನವದೆಹಲಿ: ಪತಂಜಲಿ ಸಂಸ್ಥೆಯ ಹಾದಿ ತಪ್ಪಿಸುವ ಜಾಹಿರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಯ ಮುಖ್ಯಸ್ಥರಾದ ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ ಕ್ಷಮೆ ಯಾಚನೆ ಪತ್ರದ ಜಾಹಿರಾತನ್ನು ಕಡತಗಳಿಗೆ ಸೇರಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚನೆ ನೀಡಿದೆ.

ಪತಂಜಲಿ ಆಯುರ್ವೇದ ಲಿಮಿಟೆಡ್‌ನ ದಾರಿತಪ್ಪಿಸುವ ಜಾಹೀರಾತು ಪ್ರಕರಣದ ವಿಚಾರಣೆ ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ನಡೆಯಿತು. ಕಂಪನಿಯ ಸಂಸ್ಥಾಪಕರಾದ ಯೋಗ ಗುರು ರಾಮದೇವ್ ಮತ್ತು ಬಾಲಕೃಷ್ಣ ಆಚಾರ್ಯ ಅವರ ಪರವಾಗಿ ಬೇಷರತ್ ಕ್ಷಮೆಯಾಚಿಸುವ ಕ್ಷಮಾಪಣೆ ಪತ್ರವನ್ನು ಮುದ್ರಿಸಲಾಗಿದೆ ಎಂದು ಅವರ ಪರವಾಗಿ ವಕೀಲರು ಕೋರ್ಟ್ ಗೆ ಮಾಹಿತಿ ನೀಡಿದರು.

ಜಾಹೀರಾತಿನ ಪ್ರಕರಣದಲ್ಲಿ ಯೋಗ ಗುರು ರಾಮ್‌ದೇವ್ ಮತ್ತು ಪತಂಜಲಿ ಆಯುರ್ವೇದ ಲಿಮಿಟೆಡ್‌ನ ಎಂಡಿ ಬಾಲಕೃಷ್ಣ ಅವರು ಪತ್ರಿಕೆಗಳಲ್ಲಿ ಕ್ಷಮೆಯಾಚನೆಯನ್ನು ಪ್ರಕಟಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು. ಅವರು ಮಾಡಿದ ತಪ್ಪುಗಳಿಗೆ ಬೇಷರತ್ ಕ್ಷಮೆಯಾಚಿಸಿ ಹೆಚ್ಚುವರಿ ಜಾಹೀರಾತು ನೀಡಲಾಗುವುದು ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

ಈ ಹಿಂದೆ ಪತಂಜಲಿ ಸಂಸ್ಥೆಯ ಉಭಯ ಮುಖ್ಯಸ್ಥರು ಸಲ್ಲಿಸಿದ್ದ 'ಭೇಷರತ್ ಕ್ಷಮೆ'ಯನ್ನು ನಿರಾಕರಿಸಿದ್ದ ಸುಪ್ರೀಂ ಕೋರ್ಟ್ ಅವರಿಗೆ ಛೀಮಾರಿ ಹಾಕಿತ್ತು. ಆದರೆ ಇದೀಗ ಬಾಬಾ ರಾಮ್ ದೇವ್ ಪತ್ರಿಕೆಗಳಲ್ಲಿ ತಮ್ಮ ಕ್ಷಮಾಪಣೆ ಪತ್ರವನ್ನು ಮುದ್ರಿಸಿರುವುದಾಗಿ ಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. ಈ ವಾದವನ್ನು ಆಲಿಸಿದ ಕೋರ್ಟ್ ರಾಮ್ ದೇವ್ ಅವರ ಕ್ಷಮೆ ಜಾಹಿರಾತನ್ನು ಕಡತಗಳಿಗೆ ಸೇರಿಸುವಂತೆ ಸೂಚನೆ ನೀಡಿದೆ.

ಪತಂಜಲಿ ಆಯುರ್ವೇದ್ ಲಿಮಿಟೆಡ್‌ನ ಎಂಡಿ ರಾಮ್‌ದೇವ್ ಅವರು ಪತ್ರಿಕೆಗಳಲ್ಲಿ ಪ್ರಕಟಿಸಿರುವ ಕ್ಷಮೆಯಾಚನೆಯನ್ನು ಎರಡು ದಿನಗಳಲ್ಲಿ ದಾಖಲೆಗೆ ಸೇರಿಸುವಂತೆ ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಅವರ ಪೀಠವು ರಾಮ್‌ದೇವ್ ಮತ್ತು ಬಾಲಕೃಷ್ಣ ಅವರ ವಕೀಲರಿಗೆ ಪತ್ರಿಕೆಗಳಲ್ಲಿ ಪ್ರಕಟವಾದ ಕ್ಷಮಾಪಣೆ ಪತ್ರದ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶಿಸಿದೆ.

67 ಪತ್ರಿಕೆಗಳಲ್ಲಿ ಕ್ಷಮಾಪಣೆ ಪತ್ರ ಪ್ರಕಟ

ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಇಬ್ಬರ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಸೋಮವಾರ ದೇಶಾದ್ಯಂತ 67 ಪತ್ರಿಕೆಗಳಲ್ಲಿ ಕ್ಷಮಾಪಣೆಯನ್ನು ಪ್ರಕಟಿಸಿದ್ದೇವೆ ಎಂದರು. ಈ ವಾದವನ್ನು ಆಲಿಸಿದ ಕೋರ್ಟ್ ಜಾಹಿರಾತನ್ನು ದಾಖಲೆಗೆ ಸೇರಿಸುವಂತೆ ಸೂಚನೆ ನೀಡಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 30ಕ್ಕೆ ನಿಗದಿಪಡಿಸಿದೆ.

ಯಾವ ರೀತಿ ಜಾಹೀರಾತು ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆ ಕೇಳಿ

ಯಾವ ರೀತಿ ಜಾಹೀರಾತು (Advertisements) ಪ್ರಕಟಿಸಿದ್ದೀರಿ ಅದೇ ಗಾತ್ರದಲ್ಲಿ ಪತ್ರಿಕೆಯಲ್ಲಿ ಕ್ಷಮೆಯನ್ನು ಕೇಳಬೇಕೆಂದು ಪತಂಜಲಿ ಸಂಸ್ಥೆಗೆ ಸುಪ್ರೀಂ ಕೋರ್ಟ್ ಹೇಳಿದೆ. ಬಾಬಾ ರಾಮ್‌ದೇವ್ ಪರ ವಾದ ಮಂಡಿಸಿದ ವಕೀಲ ಮುಕುಲ್ ರೋಹಟಗಿ, ಪತ್ರಿಕೆಗಳಲ್ಲಿ ಕ್ಷಮಾಪಣೆ ಪ್ರಕಟವಾಗಿದೆ ಎಂದು ಕೋರ್ಟ್‌ ಗಮನಕ್ಕೆ ತಂದರು. ಈ ವೇಳೆ ನಿನ್ನೆ ಯಾಕೆ ಕ್ಷಮಾಪಣೆ ಪ್ರಕಟವಾಗಿದೆ ಎಂದು ಪ್ರಶ್ನಿಸಿದ ಪೀಠ ಜಾಹೀರಾತು ಯಾವ ಗಾತ್ರದಲ್ಲಿ ಪ್ರಕಟವಾಗಿದೆಯೇ ಅದೇ ರೀತಿಯಾಗಿ ಕ್ಷಮೆ ಕೇಳಬೇಕೆಂದು ಆದೇಶಿಸಿತು.

ಅಧಿಕಾರಿಗಳು ಆದಾಯವನ್ನು ನೋಡುವಲ್ಲಿ ನಿರತರಾಗಿದ್ದಂತೆ ತೋರುತ್ತಿದೆ. ಒಂದು ಸುದ್ದಿಟಿವಿಯಲ್ಲಿ ಆಂಕರ್ ಪತಂಜಲಿ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಏನಾಯಿತು ಎಂಬುದರ ಕುರಿತು ಓದುತ್ತಿದ್ದಾರೆ. ಇದೆ ಅವಧಿಯಲ್ಲಿ ಜಾಹೀರಾತು ಪತಂಜಲಿ ಕೂಡಾ ಚಾಲನೆಯಲ್ಲಿದೆ ಎಂತಹ ಪರಿಸ್ಥಿತಿ ಎಂದು ನ್ಯಾ. ಅಮಾನುಲ್ಲಾ ಟೀಕಿಸಿದರು.

ಸರ್ಕಾರಕ್ಕೂ ಛಾಟಿ

ಪತಂಜಲಿ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಸರ್ಕಾರ ಹೇಗೆ ಪತ್ರ ಬರೆಯಿತು ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್, ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಆಕ್ಟ್ ಮತ್ತು ಡ್ರಗ್ಸ್ ಮತ್ತು ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯಿದೆಯಂತಹ ಕಾನೂನುಗಳ ಅನುಷ್ಠಾನವನ್ನು ಸೂಕ್ಷ್ಮವಾಗಿ ಗಮನಿಸುವುದಾಗಿ ತಿಳಿಸಿತು.

ತಪ್ಪುದಾರಿಗೆಳೆಯುವ ಜಾಹೀರಾತುಗಳಿಂದ ಪ್ರಭಾವಿತರಾಗಿ ಔಷಧಗಳನ್ನು ಸೇವಿಸುವ ಶಿಶುಗಳು ಮತ್ತು ಮಕ್ಕಳು ಮತ್ತು ವೃದ್ಧರ ಆರೋಗ್ಯದ ಮೇಲೆ ಇದು ಹೇಗೆ ಪರಿಣಾಮ ಬೀರುತ್ತದೆ. ನಾವು ನಿರ್ದಿಷ್ಟವಾಗಿ ಒಬ್ಬರ ಮೇಲೆ ಅರೋಪಿಸುತ್ತಿಲ್ಲ, ಗ್ರಾಹಕರು/ಸಾರ್ವಜನಿಕರನ್ನು ಹೇಗೆ ದಾರಿ ತಪ್ಪಿಸಲಾಗುತ್ತಿದೆ ಎಂಬುದರ ಕುರಿತು ಹೆಚ್ಚಿನ ಹಿತಾಸಕ್ತಿಯಾಗಿದೆ ಎಂದು ಎಂದು ನ್ಯಾಯಾಲಯ ಹೇಳಿತು. ಅಲ್ಲದೇ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯವನ್ನು ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಸೇರಿಸಲು ನ್ಯಾಯಾಲಯ ನಿರ್ಧರಿಸಿದೆ.

ಹಿಂದೆಯೇ ಎಚ್ಚರಿಕೆ ನೀಡಿದ್ದ ಕೋರ್ಟ್

‘ಅಲೋಪತಿ ಚಿಕಿತ್ಸಾ ಕ್ರಮವನ್ನು ಅವಹೇಳನ ಮಾಡುವ’ ಯಾವುದೇ ಪ್ರಯತ್ನ ಮಾಡದಂತೆ ಕೋರ್ಟ್ ಏಪ್ರಿಲ್ 16ರಂದು ರಾಮ್ ದೇವ್ ಮತ್ತು ಬಾಲಕೃಷ್ಣ ಅವರಿಗೆ ನಿರ್ದೇಶನ ನೀಡಿತ್ತು. ಪತಂಜಲಿ ಆಯುರ್ವೇದ ಲಿಮಿಟೆಡ್‌ನ ತಪ್ಪುದಾರಿಗೆಳೆಯುವ ಜಾಹೀರಾತಿನ ಪ್ರಕರಣದಲ್ಲಿ ಒಂದು ವಾರದೊಳಗೆ "ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಮತ್ತು ಪಶ್ಚಾತ್ತಾಪ ವ್ಯಕ್ತಪಡಿಸಲು" ನ್ಯಾಯಾಲಯ ಅವರಿಗೆ ಅವಕಾಶ ನೀಡಿತ್ತು. ಈ ಹಂತದಲ್ಲಿ ಅವರಿಗೆ ಯಾವುದೇ ಪರಿಹಾರ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಕೂಡ ಸ್ಪಷ್ಟಪಡಿಸಿತ್ತು.

ಅಂದಹಾಗೆ ಕೋವಿಡ್ ವ್ಯಾಕ್ಸಿನೇಷನ್ ಮತ್ತು ಆಧುನಿಕ ವೈದ್ಯಕೀಯ ಪದ್ಧತಿಗಳ ವಿರುದ್ಧ ತಪ್ಪು ಮಾಹಿತಿ ಅಭಿಯಾನವನ್ನು ಆರೋಪಿಸಿ 2022 ರಲ್ಲಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಪ್ರಕರಣದ ಅರ್ಜಿ ವಿಚಾರಣೆಯನ್ನು ಏ.30ಕ್ಕೆ ಮುಂದೂಡಿದ ಪೀಠ ಅಂದು ನ್ಯಾಯಾಲಯಕ್ಕೆ ಪತಂಜಲಿ ಸಂಸ್ಥಾಪಕರಾದ ರಾಮ್‌ದೇವ್ ಮತ್ತು ಬಾಲಕೃಷ್ಣ ಹಾಜರಾಗಬೇಕೆಂದು ಸೂಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT