ರಾಹುಲ್ ಗಾಂಧಿ TNIE
ದೇಶ

ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ: ಜಾರ್ಖಂಡ್ ಹೈಕೋರ್ಟ್‌ನಿಂದ ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಜಾರ್ಖಂಡ್ ಹೈಕೋರ್ಟ್, ಜೂನ್ 13ರವರೆಗೆ ಅವರ ವಿರುದ್ಧ ಸಂಸದ-ಶಾಸಕ ನ್ಯಾಯಾಲಯದಲ್ಲಿ (ಎಂಪಿ-ಎಂಎಲ್ಎ ನ್ಯಾಯಾಲಯ) ವಿಚಾರಣೆಗೆ ತಡೆಯಾಜ್ಞೆ ನೀಡಿದೆ.

ರಾಂಚಿ: ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದ ಜಾರ್ಖಂಡ್ ಹೈಕೋರ್ಟ್, ಜೂನ್ 13ರವರೆಗೆ ಅವರ ವಿರುದ್ಧ ಸಂಸದ-ಶಾಸಕ ನ್ಯಾಯಾಲಯದಲ್ಲಿ (ಎಂಪಿ-ಎಂಎಲ್ಎ ನ್ಯಾಯಾಲಯ) ವಿಚಾರಣೆಗೆ ತಡೆಯಾಜ್ಞೆ ನೀಡಿದೆ.

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ಚೈಬಾಸಾ ಜಿಲ್ಲೆಯ ಸಂಸದ-ಶಾಸಕ ನ್ಯಾಯಾಲಯವು ರಾಹುಲ್ ಗಾಂಧಿ ವಿರುದ್ಧ ಫೆಬ್ರವರಿ 27ರಂದು ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಇದನ್ನು ತಡೆಯುವಂತೆ ರಾಹುಲ್ ಗಾಂಧಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆಗೆ ತಡೆ ನೀಡುವುದರೊಂದಿಗೆ ಪ್ರಕರಣದ ದೂರುದಾರರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಎರಡು ವಾರಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದೆ.

2019ರ ಚುನಾವಣಾ ಪ್ರಚಾರದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ರಾಹುಲ್ ಗಾಂಧಿ ವಿರುದ್ಧ ಚೈಬಾಸಾದ ಪ್ರತಾಪ್ ಕುಮಾರ್ ಕಟಿಯಾರ್ ಪ್ರಕರಣ ದಾಖಲಿಸಿದ್ದರು. ಕಟಿಯಾರ್ ಅವರು ಚೈಬಾಸಾದ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ, ರಾಹುಲ್ ಹೇಳಿಕೆಗಳು ಅವಹೇಳನಕಾರಿ ಮತ್ತು ಉದ್ದೇಶಪೂರ್ವಕವಾಗಿ ಶಾ ಅವರ ಘಟನೆಗೆ ಧಕ್ಕೆ ತರಲು ಮಾಡಲಾಗಿದೆ ಎಂದು ಹೇಳಿದ್ದರು.

ಈ ದೂರಿನ ಮೇರೆಗೆ ಚೈಬಾಸಾ ನ್ಯಾಯಾಲಯವು 2022ರ ಏಪ್ರಿಲ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸಿತ್ತು. ಆದರೆ, ರಾಹುಲ್ ಗಾಂಧಿ ಅವರು ಚೈಬಾಸಾ ನ್ಯಾಯಾಲಯಕ್ಕೆ ಹಾಜರಾಗಲಿಲ್ಲ, ನಂತರ ನ್ಯಾಯಾಲಯವು ಫೆಬ್ರವರಿ 27ರಂದು ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿತು.

ಇದಾದ ನಂತರ, ಕಾಂಗ್ರೆಸ್ ನಾಯಕ ತಮ್ಮ ವಕೀಲರ ಮೂಲಕ ಚೈಬಾಸಾ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದರು. ಆದರೆ ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿತು. ನಂತರ ಅವರು ಜಾರ್ಖಂಡ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಎರಡು ವಾರಗಳ ನಂತರ ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

SCROLL FOR NEXT