ಸಾಂದರ್ಭಿಕ ಚಿತ್ರ 
ದೇಶ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹುತಾತ್ಮ, ಗುಂಡಿನ ಚಕಮಕಿಯಲ್ಲಿ ಓರ್ವ ಸಾವು

ಮಣಿಪುರದಲ್ಲಿ ಶೇಕಡಾ 75 ರಷ್ಟು ಮತದಾನವಾಗಿದ್ದು, ಯಾವುದೇ ಸಮಸ್ಯೆಯಾಗಿಲ್ಲ ಎಂದು ಮಣಿಪುರ ಮುಖ್ಯ ಚುನಾವಣಾಧಿಕಾರಿ ಹೇಳಿದರು.

ಬಿಷ್ಣುಪುರ: ಮಣಿಪುರದಲ್ಲಿ ಶನಿವಾರ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) ಇಬ್ಬರು ಸಿಬ್ಬಂದಿ ಹುತಾತ್ಮರಾಗಿ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ಮತ್ತೊಂದು ಘಟನೆಯಲ್ಲಿ ಮಣಿಪುರದಲ್ಲಿ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆದು ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚುರಾಚಂದ್‌ಪುರ ಜಿಲ್ಲೆಯ ಗಡಿಯಲ್ಲಿರುವ ಬಿಷ್ಣುಪುರ್ ಜಿಲ್ಲೆಯ ಮೊಯಿರಾಂಗ್ ಮತಗಟ್ಟೆ ವ್ಯಾಪ್ತಿಯ ನರನ್‌ಸೇನಾ ಪ್ರದೇಶದಲ್ಲಿ ಕಳೆದ ಮಧ್ಯರಾತ್ರಿಯಿಂದ ಆರಂಭಗೊಂಡ ಉಗ್ರರ ಜೊತೆಗಿನ ದಾಳಿ ಬೆಳಗಿನ ಜಾವ 2:15ರವರೆಗೆ ಮುಂದುವರೆದು ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಕುಕಿ ಉಗ್ರರು ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ ಹುತಾತ್ಮರಾದ ಸಿಬ್ಬಂದಿಗಳಲ್ಲಿ ಒಬ್ಬರು ಸಬ್ ಇನ್ಸ್‌ಪೆಕ್ಟರ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಹುತಾತ್ಮ ಸಿಬ್ಬಂದಿ ರಾಜ್ಯದ ಬಿಷ್ಣುಪುರ್ ಜಿಲ್ಲೆಯ ನರಸೇನಾ ಪ್ರದೇಶದಲ್ಲಿ ನಿಯೋಜಿಸಲಾದ ಸಿಆರ್‌ಪಿಎಫ್ 128 ಬೆಟಾಲಿಯನ್‌ನವರು.

ಕೆಲವು ಸ್ಥಳೀಯರ ಪ್ರಕಾರ, ಬಂದೂಕುಧಾರಿಗಳ ದಾಳಿಯು ಸುಮಾರು ಎರಡು ಗಂಟೆಗಳ ಕಾಲ ಗುಂಡಿನ ಚಕಮಕಿಗೆ ಕಾರಣವಾಯಿತು. ದಾಳಿಯ ವೇಳೆ ಬಂದೂಕುಧಾರಿಗಳು ಬಾಂಬ್‌ಗಳನ್ನೂ ಬಳಸಿದ್ದಾರೆ.

ಮಣಿಪುರದಲ್ಲಿ ಗುಂಡಿನ ಚಕಮಕಿ, ಓರ್ವ ಸಾವು

ಮಣಿಪುರದಲ್ಲಿ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, 33 ವರ್ಷದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಕಾಂಗ್‌ಕೋಪಿ ಮತ್ತು ಇಂಫಾಲ್ ಪೂರ್ವ ಜಿಲ್ಲೆಗಳ ಗಡಿಯಲ್ಲಿರುವ ಸಿನಮ್ ಕೋಮ್‌ನಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಗುಂಡಿನ ಚಕಮಕಿಯ ನಂತರ ನಾಪತ್ತೆಯಾಗಿದ್ದ 'ಗ್ರಾಮ ಸ್ವಯಂಸೇವಕ' ಇಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾನೆ ಎಂದು ಅವರು ಹೇಳಿದರು. ಆತನನ್ನು ಲೈಶ್ರಾಮ್ ಪ್ರೇಮ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟ ಸಂಭವಿಸುವುದನ್ನು ತಡೆಯಲು ಭದ್ರತಾ ಪಡೆಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

ಮಣಿಪುರ ಮತದಾನ: ಈ ಮಧ್ಯೆ, ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಮಣಿಪುರದ ಹೊರಭಾಗದಲ್ಲಿ ಹೆಚ್ಚಿನ ಮತದಾನ ಹಿಂಸಾಚಾರ ಘಟನೆಗಳು ಕಡಿಮೆಯಾಗಿವೆ ಎಂದು ಮಣಿಪುರ ಮುಖ್ಯ ಚುನಾವಣಾ ಅಧಿಕಾರಿ ಪ್ರದೀಪ್ ಕುಮಾರ್ ಝಾ ಹೇಳಿದ್ದಾರೆ.

ಮಣಿಪುರದಲ್ಲಿ ಶೇಕಡಾ 75 ರಷ್ಟು ಮತದಾನವಾಗಿದ್ದು, ಯಾವುದೇ ಸಮಸ್ಯೆಯಾಗಿಲ್ಲ ಎಂದು ಮಣಿಪುರ ಮುಖ್ಯ ಚುನಾವಣಾಧಿಕಾರಿ ಹೇಳಿದರು.

2019 ರ ಚುನಾವಣೆಗೆ ಹೋಲಿಸಿದರೆ ಹೊರ ಮಣಿಪುರ ಕ್ಷೇತ್ರದಲ್ಲಿ ಮತದಾನವು ಹೆಚ್ಚು ಶಾಂತಿಯುತವಾಗಿ ನಡೆಯಿತು ಎಂದು ಝಾ ಹೇಳಿದರು. ಈ ಮೊದಲು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನದ ವೇಳೆ ಹಲವು ಹಿಂಸಾಚಾರದ ಘಟನೆಗಳು ವರದಿಯಾದ ನಂತರ ಇನ್ನರ್ ಮಣಿಪುರ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಏಪ್ರಿಲ್ 22 ರಂದು ಮರು ಮತದಾನ ನಡೆಸಲಾಯಿತು.

13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ (UTs) 88 ಸ್ಥಾನಗಳಿಗೆ ಎರಡನೇ ಹಂತದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯಗೊಂಡಿದೆ. ಏಳು ಹಂತಗಳ ಸಾರ್ವತ್ರಿಕ ಚುನಾವಣೆಗೆ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 102 ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ನಡೆಯಿತು.

ಚುನಾವಣಾ ಆಯೋಗದ ಪ್ರಕಾರ, ಆರಂಭಿಕ ಹಂತದಲ್ಲಿ ಒಟ್ಟಾರೆ ಮತದಾನದ ಪ್ರಮಾಣವು ಶೇಕಡಾ 62 ಕ್ಕಿಂತ ಹೆಚ್ಚು ದಾಖಲಾಗಿದೆ. ಮೇ 7ರಂದು ಮುಂದಿನ ಸುತ್ತಿನ ಮತದಾನ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT