ನಟ ಸಾಹಿಲ್ ಖಾನ್ 
ದೇಶ

ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಛತ್ತೀಸಗಢದಲ್ಲಿ ನಟ ಸಾಹಿಲ್ ಖಾನ್ ಬಂಧಿಸಿದ ಎಸ್‌ಐಟಿ

ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡವು (ಎಸ್ಐಟಿ) ನಟ ಸಾಹಿಲ್ ಖಾನ್ ಅವರನ್ನು ಛತ್ತೀಸ್‌ಗಢದಲ್ಲಿ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನ್ ಅವರನ್ನು ಎಸ್‌ಐಟಿ ಇತ್ತೀಚೆಗಷ್ಟೇ ವಿಚಾರಣೆಗೆ ಒಳಪಡಿಸಿತ್ತು.

ಮುಂಬೈ: ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡವು (ಎಸ್ಐಟಿ) ನಟ ಸಾಹಿಲ್ ಖಾನ್ ಅವರನ್ನು ಛತ್ತೀಸ್‌ಗಢದಲ್ಲಿ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಸಾಹಿಲ್ ಖಾನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದ ನಂತರ ನಟನನ್ನು ಶನಿವಾರ ಛತ್ತೀಸ್‌ಗಢದ ಜಗದಲ್‌ಪುರದಿಂದ ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನ್ ಅವರನ್ನು ಎಸ್‌ಐಟಿ ಇತ್ತೀಚೆಗಷ್ಟೇ ವಿಚಾರಣೆಗೆ ಒಳಪಡಿಸಿತ್ತು.

ಮುಂಬೈನಲ್ಲಿ ವಿಚಾರಣೆಗೆ ಒಳಗಾದ ನಂತರ ನಟ ಸಾಹಿಲ್ ಖಾನ್ ಮುಂಬೈ ಪೊಲೀಸ್ ಪ್ರಧಾನ ಕಚೇರಿಯನ್ನು ತೊರೆದರು.

ರಾಜ್ಯದ ಕೆಲವು ಹಣಕಾಸು ಮತ್ತು ರಿಯಲ್ ಎಸ್ಟೇಟ್ ಸಂಸ್ಥೆಗಳು ಮತ್ತು ವಿವಾದಿತ ಮಹದೇವ್ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರ ನಡುವಿನ ಹಣ ಅಕ್ರಮ ವಹಿವಾಟಿನ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ಸಂಬಂಧ ಸಾಹಿಲ್ ಖಾನ್ ಸೇರಿದಂತೆ ಇತರ 31 ವ್ಯಕ್ತಿಗಳ ವಿರುದ್ಧವೂ ತನಿಖೆ ನಡೆಯುತ್ತಿದೆ.

15 ಕೋಟಿ ಸಾವಿರ ರೂ. ಅವ್ಯವಹಾರಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ಆ್ಯಪ್‌ ಪ್ರಕರಣದಲ್ಲಿ ಇಲ್ಲಿಯವರೆಗೆ ಒಬ್ಬನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ತನಿಖೆಯು ಆರೋಪಿಗಳ ಬ್ಯಾಂಕ್ ಖಾತೆಗಳು, ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಎಲ್ಲ ತಾಂತ್ರಿಕ ಸಾಧನಗಳನ್ನು ಪರಿಶೀಲಿಸುವುದನ್ನು ಒಳಗೊಂಡಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಸ್ಟೈಲ್', 'ಎಕ್ಸ್‌ಕ್ಯೂಸ್ ಮಿ' ಚಿತ್ರಗಳಿಗೆ ಹೆಸರಾದ ಸಾಹಿಲ್ ಖಾನ್ ಫಿಟ್‌ನೆಸ್ ಎಕ್ಸ್‌ಪರ್ಟ್ ಆಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video

ಏಷ್ಯನ್ ಗೇಮ್ಸ್ 2026 ಫೈನಲ್: ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಭರ್ಜರಿ ಅರ್ಧ ಶತಕ, ಪಾಕ್ ಗೆಲ್ಲಲು 212 ರನ್ ಗಳ ಗುರಿ ನೀಡಿದ ಭಾರತ!

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!