ಸಾಂದರ್ಭಿಕ ಚಿತ್ರ 
ದೇಶ

ಬಿಹಾರ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪೊಲೀಸರ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯ

ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಿಂದಿನಿಂದ ವೇಗವಾಗಿ ಬಂದ ಕಂಟೈನರ್ ಟ್ರಕ್ ವ್ಯಾನ್‌ಗೆ ಡಿಕ್ಕಿ ಹೊಡೆದಿದ್ದರಿಂದ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ ಮತ್ತು ಹನ್ನೆರಡು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಹಾರ: ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹಿಂದಿನಿಂದ ವೇಗವಾಗಿ ಬಂದ ಕಂಟೈನರ್ ಟ್ರಕ್ ವ್ಯಾನ್‌ಗೆ ಡಿಕ್ಕಿ ಹೊಡೆದಿದ್ದರಿಂದ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ ಮತ್ತು ಹನ್ನೆರಡು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯ ಮೂರನೇ ಹಂತದ ಕರ್ತವ್ಯಕ್ಕಾಗಿ ಪೊಲೀಸ್ ತಂಡ ಸುಪೌಲ್‌ಗೆ ತೆರಳುತ್ತಿದ್ದಾಗ ಮಧ್ಯಾಹ್ನ ಈ ಘಟನೆ ನಡೆದಿದೆ. ಚುನಾವಣಾ ಕರ್ತವ್ಯಕ್ಕೆ ಪೊಲೀಸರನ್ನು ಕರೆದೊಯ್ಯುತ್ತಿದ್ದ ವ್ಯಾನ್ ಬರ್ಹಿಮಾ ಬಜಾರ್ ಬಳಿ ನಿಂತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದಿದೆ. ಇಬ್ಬರು ಪೊಲೀಸರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

"ಎಲ್ಲಾ ಗಾಯಾಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಕಂಟೇನರ್ ನ್ನು ಸ್ಥಳೀಯ ಪೊಲೀಸರು ವಶಪಡಿಸಿಕೊಂಡಿದ್ದಾರೆ" ಎಂದು ಗೋಪಾಲ್‌ಗಂಜ್‌ನ ಪೊಲೀಸ್ ಅಧೀಕ್ಷಕರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್