ರೇವಂತ್ ರೆಡ್ಡಿ 
ದೇಶ

ಅಮಿತ್ ಶಾ ವಿಡಿಯೋ ತಿರುಚಿದ ಪ್ರಕರಣ: ದೆಹಲಿ ಪೊಲೀಸರಿಂದ ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾಷಣದ ತಿರುಚಿದ ವಿಡಿಯೋಗೆ ಸಂಬಂಧಿಸಿದಂತೆ ಮೇ 1 ರಂದು ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ದೆಹಲಿ ಪೊಲೀಸರು ಸಮನ್ಸ್ ನೀಡಿದ್ದಾರೆ.

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾಷಣದ ತಿರುಚಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದಕ್ಕೆ ಸಂಬಂಧಿಸಿದಂತೆ ಮೇ 1 ರಂದು ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ದೆಹಲಿ ಪೊಲೀಸರು ಸಮನ್ಸ್ ನೀಡಿದ್ದಾರೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

ಮೂಲಗಳ ಪ್ರಕಾರ, ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿದ ತೆಲಂಗಾಣ ಕಾಂಗ್ರೆಸ್‌ ಮುಖ್ಯಸ್ಥ ರೇವಂತ್ ರೆಡ್ಡಿ ಸೇರಿದಂತೆ ಐವರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಎಕ್ಸ್‌ನಲ್ಲಿ ನಕಲಿ ವೀಡಿಯೊವನ್ನು ಪೋಸ್ಟ್ ಮಾಡಲು ಬಳಸಲಾದ ಮೊಬೈಲ್ ಫೋನ್‌ನೊಂದಿಗೆ ಹಾಜರಾಗುವಂತೆ ತೆಲಂಗಾಣ ಸಿಎಂಗೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗೃಹ ಸಚಿವಾಲಯದ ಅಧೀನದಲ್ಲಿರುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ, ಅಮಿತ್ ಶಾ ಅವರ ತಿರುಚಿದ ವಿಡಿಯೋದ ಬಗ್ಗೆ ದೂರು ದಾಖಲಿಸಿದ ನಂತರ ದೆಹಲಿ ಪೊಲೀಸರ ವಿಶೇಷ ಘಟಕ ಭಾನುವಾರ ಎಫ್‌ಐಆರ್ ದಾಖಲಿಸಿದೆ.

ಇದಕ್ಕೂ ಮುನ್ನ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು, ತೆಲಂಗಾಣ ಕಾಂಗ್ರೆಸ್ ಘಟಕವು ಅಮಿತ್ ಶಾ ಅವರ ತಿರುಚಿದ ವಿಡಿಯೋ ಪ್ರಸಾರ ಮಾಡುತ್ತಿದೆ ಎಂದು ಆರೋಪಿಸಿದ್ದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಾತಿಯನ್ನು ರದ್ದುಪಡಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆದ್ದಾರೆ ಎನ್ನಲಾದ ನಕಲಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿಗೆ ದಿನಕ್ಕೊಂದು ಶಾಕ್; ನಂದೀಗ್ರಾಮದ ಬಳಿಕ ಕೈಕೊಟ್ಟ ರೆಜಿನಗರ ಉಪಚುನಾವಣೆ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ; ನಾಮಪತ್ರ ವಾಪಸ್

ವಿದೇಶಿ ನೌಕರರ ನೇಮಕಾತಿಗೆ ಅಮೆರಿಕ ಕತ್ತರಿ: H-1B ವೀಸಾ ನಿರ್ಬಂಧ ಮತ್ತೊಂದು ವರ್ಷಕ್ಕೆ ಮುಂದುವರಿಕೆ..!

UPI MDR: ಗ್ರಾಹಕರಿಗೆ ಮತ್ತೊಂದು ತಲೆ ಬಿಸಿ; ಇನ್ನು ಮುಂದೆ ಪೆಟ್ರೋಲ್ ಪಂಪ್ ಗಳಲ್ಲಿ 2,000 ಕ್ಕಿಂತ ಹೆಚ್ಚಿನ ಯುಪಿಐ ಪಾವತಿ ಬಂದ್!

ಕನ್ನಡ ವರ್ಣಮಾಲೆ ಬರೆಯಲು ಬಾರದ ವಿದ್ಯಾರ್ಥಿಗಳ ಕಂಡು ಪ್ರದೀಪ್ ಈಶ್ವರ್ ಶಾಕ್: ಶಾಸಕರ ಸೂಚನೆಯಂತೆ 180 ಶಿಕ್ಷಕರಿಗೆ BEO ನೋಟಿಸ್!

ಪರೀಕ್ಷೆಯ ವೇಳೆ ChatGPT ಬಳಕೆ: ಸಿಕ್ಕಿ ಬಿದ್ದ IIT ವಿದ್ಯಾರ್ಥಿ ಆತ್ಮಹತ್ಯೆ