ಕೋವಿಶೀಲ್ಡ್ 
ದೇಶ

ಕೋವಿಡ್-19: Covishield ಲಸಿಕೆ ಅಡ್ಡಪರಿಣಾಮ ಬೀರಬಹುದು.. ಆದರೆ..: AstraZeneca

ಕೋವಿಶೀಲ್ಡ್‌ (Covishield) ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಬ್ರಿಟೀಷ್‌ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ಒಪ್ಪಿಕೊಂಡಿದೆ.

ನವದೆಹಲಿ: ಕೋವಿಶೀಲ್ಡ್‌ (Covishield) ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಬ್ರಿಟೀಷ್‌ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ಒಪ್ಪಿಕೊಂಡಿದೆ.

ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ನೀಡಿದ್ದ ಕೋವಿಶೀಲ್ಡ್‌ (Covishield) ಲಸಿಕೆಯಿಂದಾಗಿ ಅತ್ಯಪರೂಪದ ಪ್ರಕರಣಗಳಲ್ಲಿ ಕೊಂಚ ಅಡ್ಡ ಪರಿಣಾಮ ಉಂಟಾಗಬಹುದು ಎಂದು ಅಸ್ಟ್ರಾಜೆನೆಕಾ ಸಂಸ್ಥೆ ಹೇಳಿದ್ದು, 'ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್ ಕಡಿಮೆಯಾಗುವಿಕೆಗೆ ಕಾರಣವಾಗುವ ಸ್ಥಿತಿಯನ್ನು ಉಂಟುಮಾಡಬಹುದು ಎಂದು ಅಸ್ಟ್ರಾಜೆನೆಕಾ (AstraZeneca) ಸಂಸ್ಥೆ ತಾನು ಸಲ್ಲಿಸಿರುವ ನ್ಯಾಯಾಲಯದ ದಾಖಲೆಗಳಲ್ಲಿ ಒಪ್ಪಿಕೊಂಡಿದೆ.

ಬ್ರಿಟನ್ ಕೋರ್ಟ್ ನಲ್ಲಿ ಅಸ್ಟ್ರಾಜೆನೆಕಾ ವಿರುದ್ಧ ಪ್ರಕರಣ

ಇನ್ನು ಬ್ರಿಟನ್ ನಲ್ಲಿ ಕೋವಿಶೀಲ್ಡ್ ಲಸಿಕೆಯು ಹಲವಾರು ಪ್ರಕರಣಗಳಲ್ಲಿ ಸಾವು ಮತ್ತು ತೀವ್ರತರವಾದ ಗಾಯಗಳಿಗೆ ಕಾರಣವಾದ ಆರೋಪದ ಮೇಲೆ ಅಸ್ಟ್ರಾಜೆನೆಕಾ ಮೊಕದ್ದಮೆ ಎದುರಿಸುತ್ತಿದೆ. ಯುಕೆ ಹೈಕೋರ್ಟ್‌ನಲ್ಲಿ 51 ಪ್ರಕರಣಗಳಲ್ಲಿ ಸಂತ್ರಸ್ತರು 100 ಮಿಲಿಯನ್‌ ಪೌಂಡ್‌ಗಳವರೆಗೆ ಪರಿಹಾರ ಬಯಸಿದ್ದಾರೆ. ಪ್ರಕರಣದ ಮೊದಲ ದೂರುದಾರರಾದ ಜೇಮೀ ಸ್ಕಾಟ್ ಅವರು ಏಪ್ರಿಲ್ 2021 ರಲ್ಲಿ ಲಸಿಕೆಯನ್ನು ಪಡೆದಿದ್ದು, ಇದು ರಕ್ತ ಹೆಪ್ಪುಗಟ್ಟುವಿಕೆಯ ನಂತರ ಶಾಶ್ವತ ಮಿದುಳಿನ ಗಾಯಕ್ಕೆ ಕಾರಣವಾಯಿತು. ಇದು ಮೆದುಳು ಕೆಲಸ ಮಾಡುವುದನ್ನು ತಡೆಯಿತು. ತಾನು ಆಸ್ಪತ್ರೆಯಲ್ಲಿದ್ದಾಗ ಆಸ್ಪತ್ರೆ ಸಿಬ್ಬಂದಿ ತನ್ನ ಹೆಂಡತಿಗೆ ತಾನು ಸಾಯುತ್ತೇನೆ ಎಂದು ಮೂರು ಬಾರಿ ಹೇಳಿದ್ದರು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಆರೋಪ ನಿರಾಕರಿಸಿದ ಅಸ್ಟ್ರಾಜೆನೆಕಾ

ಇನ್ನು ದೂರುದಾರರು ಮಾಡಿರುವ ಆರೋಪಗಳನ್ನು ಲಸಿಕೆ ತಯಾರಿಕಾ ಸಂಸ್ಥೆ ಅಸ್ಟ್ರಾಜೆನೆಕಾ ತಳ್ಳಿಹಾಕಿದೆಯಾದರೂ, ಫೆಬ್ರವರಿಯಲ್ಲಿ ನ್ಯಾಯಾಲಯದ ದಾಖಲೆಗಳಲ್ಲಿ ಒಂದರಲ್ಲಿ ಕೋವಿಶೀಲ್ಡ್ “ಅಪರೂಪದ ಸಂದರ್ಭಗಳಲ್ಲಿ, ಟಿಟಿಎಸ್‌ಗೆ ಕಾರಣವಾಗಬಹುದು. ಟಿಟಿಎಸ್‌ ಅಂದರೆ ಥ್ರಂಬೋಸಿಸ್ ವಿತ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ಎಂದು. ಅಂದರೆ ಮಾನವರಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ರಕ್ತದ ಪ್ಲೇಟ್‌ಲೆಟ್ ಎಣಿಕೆಗೆ ಕಾರಣವಾಗುತ್ತದೆ. ಬಹಳ ಅಪರೂಪದ ಸಂದರ್ಭಗಳಲ್ಲಿ ಲಸಿಕೆಯು ಟಿಟಿಎಸ್‌ಗೆ ಕಾರಣವಾಗಬಹುದು. ಲಸಿಕೆ ಮಾತ್ರವಲ್ಲದೇ ಯಾವುದೇ ಲಸಿಕೆಯ ಅನುಪಸ್ಥಿತಿಯೂ ಕೂಡ ಟಿಟಿಎಸ್ ಗೆ ಕಾರಣವಾಗುತ್ತದೆ ಎಂದು ಅಸ್ಟ್ರಾಜೆನೆಕಾ ಹೇಳಿದೆ ಎಂದು ವರದಿಯಾಗಿದೆ.

ಅಂದಹಾಗೆ ಇಡೀ ಜಗತ್ತನ್ನು ಕಾಡಿದ ಕೋವಿಡ್‌ ಸಾಂಕ್ರಾಮಿಕ ತಡೆಗೆ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿತು. ಭಾರತ ದೇಶದಲ್ಲಿ ಈ ಲಸಿಕೆಯನ್ನು ವ್ಯಾಪಕವಾಗಿ ನಿರ್ವಹಿಸಲ್ಪಟ್ಟಿತು. ಇದೀಗ ಇದೇ ಲಸಿಕೆ ವಿರುದ್ಧ ಅಡ್ಡಪರಿಣಾಮದ ಮಾತುಗಳು ಕೇಳುಬರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT