ಏಕನಾಥ್ ಶಿಂಧೆ - ಸುರೇಶ್ ನವಲೆ 
ದೇಶ

ಶಿಂಧೆ ಶಿವಸೇನೆಗೆ ತೀವ್ರ ಹಿನ್ನಡೆ: ಮಾಜಿ ಸಚಿವ ಸುರೇಶ್ ನವಲೆ ರಾಜೀನಾಮೆ, ಎನ್‌ಸಿಪಿ(ಎಸ್‌ಪಿ) ಅಭ್ಯರ್ಥಿಗೆ ಬೆಂಬಲ

ಬಿಜೆಪಿಯ ಒತ್ತಡಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಣಿದಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಸುರೇಶ್ ನವಲೆ ಅವರು ಶಿಂಧೆ ನೇತೃತ್ವದ ಶಿವಸೇನೆಗೆ ರಾಜೀನಾಮೆ ನೀಡಿದ್ದಾರೆ.

ಮುಂಬೈ: ಬಿಜೆಪಿಯ ಒತ್ತಡಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಣಿದಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಸುರೇಶ್ ನವಲೆ ಅವರು ಶಿಂಧೆ ನೇತೃತ್ವದ ಶಿವಸೇನೆಗೆ ರಾಜೀನಾಮೆ ನೀಡಿದ್ದಾರೆ.

ನವಲೆ ಅವರು ತಾವು ಯಾವುದೇ ಪಕ್ಷವನ್ನು ಸೇರುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಎನ್‌ಸಿಪಿ(ಎಸ್‌ಪಿ) ಬೀಡ್ ಅಭ್ಯರ್ಥಿ ಬಜರಂಗ್ ಸೋನಾವಾನೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

ಸೋಮವಾರ ಸುದ್ದಿವಾಹಿನಿಯೊಂದರ ಜೊತೆ ಮಾತನಾಡಿದ ಬೀಡ್ ಮೂಲದ ಸುರೇಶ್ ನವಲೆ ಅವರು, ಏಪ್ರಿಲ್ 25 ರಂದೇ ತಾವು ಶಿವಸೇನೆಗೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ.

“ಮುಖ್ಯಮಂತ್ರಿಯು ಬಿಜೆಪಿಯ ಒತ್ತಡಕ್ಕೆ ಮಣಿದಿದ್ದಾರೆ ಎಂಬುದು ನನ್ನ ಆರೋಪ. ಅವರು ಹಿಂದೆ ಶಿವಸೇನಾ ವಿರುದ್ಧ ಬಂಡಾಯವೆದ್ದು ಸರ್ಕಾರ ರಚಿಸಿದರು. ಆದರೆ ಅದೇ ಉತ್ಸಾಹದಲ್ಲಿ ಬಿಜೆಪಿಯ ಒತ್ತಡವನ್ನು ವಿರೋಧಿಸಲಿಲ್ಲ ಎಂದು ನವಲೆ ಆರೋಪಿಸಿದ್ದಾರೆ.

2019 ರಲ್ಲಿ, ಅಂದಿನ ಅವಿಭಜಿತ ಶಿವಸೇನೆ ಮಹಾರಾಷ್ಟ್ರದ 48 ಲೋಕಸಭಾ ಸ್ಥಾನಗಳಲ್ಲಿ 22 ರಲ್ಲಿ ಸ್ಪರ್ಧಿಸಿ 18 ರಲ್ಲಿ ಜಯಗಳಿಸಿತು.

ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ(ಯುಬಿಟಿ) ಈ ಬಾರಿ ರಾಜ್ಯದಲ್ಲಿ 21 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಆದರೆ ಶಿಂಧೆ ನೇತೃತ್ವದ ಶಿವಸೇನೆ ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸುತ್ತಿದೆ ಎಂದು ನವಲೆ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ