ಎನ್ಇಇಟಿ (ಸಾಂಕೇತಿಕ ಚಿತ್ರ) online desk
ದೇಶ

"ಅಪ್ಪಾ ನನ್ನನ್ನು ಕ್ಷಮಿಸಿ..." ಕೋಟಾದಲ್ಲಿ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ!

ರಾಜಸ್ಥಾನದ ಕೋಟಾದಲ್ಲಿ ಎನ್ಇಇಟಿ ಪರೀಕ್ಷೆ ಬರೆಯುವುದಕ್ಕೆ ತರಬೇತಿ ಪಡೆಯುತ್ತಿದ್ದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೋಟಾ: ರಾಜಸ್ಥಾನದ ಕೋಟಾದಲ್ಲಿ ಎನ್ಇಇಟಿ ಪರೀಕ್ಷೆ ಬರೆಯುವುದಕ್ಕೆ ತರಬೇತಿ ಪಡೆಯುತ್ತಿದ್ದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

20 ವರ್ಷದ ರಾಜಸ್ಥಾನದ ನಿವಾಸಿಯೇ ಆಗಿರುವ ಭರತ್ ಕುಮಾರ್ ರಜ್ಪೂತ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ ಮೂರನೇ ಬಾರಿಗೆ ಎನ್ಇಇಟಿ ಪರೀಕ್ಷೆ ಎದುರಿಸುವವರಿದ್ದರು.

ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಆತ ಪತ್ರದ ಮೂಲಕ ಪೋಷಕರಲ್ಲಿ ಕ್ಷಮೆ ಕೋರಿದ್ದು, ಅಪ್ಪಾ ನನ್ನನ್ನು ಕ್ಷಮಿಸಿ ಈ ವರ್ಷವೂ ನಾನು ಉತ್ತಮವಾಗಿ ಪರೀಕ್ಷೆ ಬರೆಯಲಿಲ್ಲ ಎಂದು ಹೇಳಿದ್ದಾರೆ.

ಜನವರಿಯಿಂದ ರಾಜಸ್ಥಾನದ ಕೋಟಾದಲ್ಲಿ ವೃತ್ತಿಪರ ಶಿಕ್ಷಣದ ಪರೀಕ್ಷೆಗಳಿಗೆ ತರಬೇತಿ ಪಡೆಯುತ್ತಿರುವವ ವಿದ್ಯಾರ್ಥಿಗಳ ಪೈಕಿ ಆತ್ಮಹತ್ಯೆಗೆ ಶರಣಾಗಿರುವ 9 ನೇ ಪ್ರಕರಣ ಇದಾಗಿದೆ.

2023 ರಿಂದ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿಗಳ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಸಾವನ್ನಪ್ಪುವುದಕ್ಕೂ ಮೊದಲು ವಿದ್ಯಾರ್ಥಿ ಒಂದು ಸಾಲಿನ ಆತ್ಮಹತ್ಯೆ ಪತ್ರ ಬರೆದಿದ್ದಾರೆ, ಮೇ.05 ರಂದು ಈ ವಿದ್ಯಾರ್ಥಿ ಪರೀಕ್ಷೆ ಬರೆಯಬೇಕಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ