ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್‌: ಕನ್ವರ್ ಯಾತ್ರಾರ್ಥಿಗಳ ವಾಹನಕ್ಕೆ ವಿದ್ಯುತ್ ತಗುಲಿ ಐವರು ಸಾವು

ಕನ್ವರ್ ಯಾತ್ರೆ ವೇಳೆ ವಿದ್ಯುತ್ ತಗುಲಿ ಐವರು ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲತೇಹಾರ್: ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಕನ್ವರ್ ಯಾತ್ರಾರ್ಥಿಗಳು ತೆರಳುತ್ತಿದ್ದ ವಾಹನಕ್ಕೆ ಹೈಟೆನ್ಷನ್ ಓವರ್‌ಹೆಡ್ ತಂತಿ ತಗುಲಿ ಐವರು ಯಾತ್ರಿಕರು ಮೃತಪಟ್ಟಿರುವ ದಾರುಣ ಘಟನೆ ಗುರುವಾರ ನಡೆದಿದೆ.

ಕನ್ವರ್ ಯಾತ್ರೆ ವೇಳೆ ವಿದ್ಯುತ್ ತಗುಲಿ ಐವರು ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬಾಳುಮಠ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ ತಂ ತೋಲದಲ್ಲಿ ಈ ಘಟನೆ ನಡೆದಿದೆ. ಯಾತ್ರಿಕರು ದಿಯೋಘರ್‌ನ ಬಾಬಾ ಬೈದ್ಯನಾಥ ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ ಅವರ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

"ಯಾತ್ರಿಕರ ವಾಹನದ ಮೇಲೆ ಹೈಟೆನ್ಷನ್ ಓವರ್ಹೆಡ್ ವೈರ್ ಬಿದ್ದಿದೆ. ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ" ಎಂದು ಬಾಲುಮಠ ಉಪವಿಭಾಗದ ಪೊಲೀಸ್ ಅಧಿಕಾರಿ ಅಶುತೋಷ್ ಕುಮಾರ್ ಸತ್ಯಂ ಅವರು ಪಿಟಿಐಗೆ ತಿಳಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮರಳು ಮಾಫಿಯಾ ವಿರುದ್ಧ ಸಿಡಿದೆದ್ದ ಸಿಎಂ ಸಲಹೆಗಾರ: ದಂಧೆಕೋರರಿಗೆ ಅಧಿಕಾರಿಗಳೇ ಸಾಥ್, ಕ್ರಮಕ್ಕೆ ಬಸವರಾಜ ರಾಯರೆಡ್ಡಿ ಆಗ್ರಹ

ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ 10ಕ್ಕೂ ಹೆಚ್ಚು ಮಹಿಳೆಯರು ಅಸ್ವಸ್ಥ; ಪುತ್ತೂರಿನಲ್ಲಿ ಆಗಿದ್ದೇನು?

ಜಲೇಬಿ, ಬೇಸನ್ ಲಡ್ಡು ತಯಾರಿಸಿದ ರಾಹುಲ್ ಗಾಂಧಿ: ವಿಪಕ್ಷ ನಾಯಕನಿಗೆ ಸ್ವೀಟ್ ಅಂಗಡಿ ಮಾಲೀಕ ನೀಡಿದ ಸಲಹೆ ಏನು ಗೊತ್ತೆ?

'ಶೋಲೆ' ಖ್ಯಾತಿಯ ಬಾಲಿವುಡ್ ನಟ ಗೋವರ್ಧನ್ ಅಸ್ರಾನಿ ವಿಧಿವಶ

Israel ಸೈನಿಕರ ಹತ್ಯೆಯ ನಂತರ ಮುರಿದುಬಿದ್ದ ಕದನ ವಿರಾಮ: ಗಾಜಾದ ಮೇಲೆ ಇಸ್ರೇಲ್ ವಾಯುದಾಳಿಯಲ್ಲಿ 45 ಮಂದಿ ಸಾವು!

SCROLL FOR NEXT