ಬೇಸ್‌ಮೆಂಟ್ ಕೋಚಿಂಗ್ ಸೆಂಟರ್‌ಗಳಿಗೆ ಬೀಗ 
ದೇಶ

ದೆಹಲಿಯ 25 ಅಕ್ರಮ ಬೇಸ್‌ಮೆಂಟ್ ಕೋಚಿಂಗ್ ಸೆಂಟರ್‌ಗಳಿಗೆ MCD ಬೀಗ

ಎಂಸಿಡಿ ಅಧಿಕೃತ ಮಾಹಿತಿಯ ಪ್ರಕಾರ ಜುಲೈ 28 ರಿಂದ ಜುಲೈ 31 ರವರೆಗೆ ನಗರದ ವಿವಿಧ ಭಾಗಗಳಲ್ಲಿರುವ ಕೋಚಿಂಗ್ ಸೆಂಟರ್‌ಗಳು, ಕಚೇರಿಗಳು ಅಥವಾ ಇತರ ವಾಣಿಜ್ಯ ಸಂಸ್ಥೆಗಳಾಗಿ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ 25 ಬೇಸ್‌ಮೆಂಟ್‌ಗಳನ್ನು ಸೀಲ್ ಮಾಡಲಾಗಿದೆ.

ನವದೆಹಲಿ: ದೆಹಲಿಯ ಕೋಚಿಂಗ್ ಸೆಂಟರ್ ನ ಬೇಸ್‌ಮೆಂಟ್ ನಲ್ಲಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳ ಸಾವಿನ ನಂತರ ಎಚ್ಚೆತ್ತುಕೊಂಡಿರುವ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್(ಎಂಸಿಡಿ), 25 ಅಕ್ರಮ ಬೇಸ್‌ಮೆಂಟ್ ಕೋಚಿಂಗ್ ಸೆಂಟರ್‌ಗಳನ್ನು ಸೀಲ್ ಮಾಡಿದೆ.

ಎಂಸಿಡಿ ಅಧಿಕೃತ ಮಾಹಿತಿಯ ಪ್ರಕಾರ ಜುಲೈ 28 ರಿಂದ ಜುಲೈ 31 ರವರೆಗೆ ನಗರದ ವಿವಿಧ ಭಾಗಗಳಲ್ಲಿರುವ ಕೋಚಿಂಗ್ ಸೆಂಟರ್‌ಗಳು, ಕಚೇರಿಗಳು ಅಥವಾ ಇತರ ವಾಣಿಜ್ಯ ಸಂಸ್ಥೆಗಳಾಗಿ ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿದ್ದ 25 ಬೇಸ್‌ಮೆಂಟ್‌ಗಳನ್ನು ಸೀಲ್ ಮಾಡಲಾಗಿದೆ.

ಈ ಅವಧಿಯಲ್ಲಿ 17 ಆಸ್ತಿ ಮಾಲೀಕರಿಗೆ ದೆಹಲಿ ಮಹಾನಗರ ಪಾಲಿಕೆ ಶೋಕಾಸ್ ನೋಟಿಸ್ ನೀಡಿದೆ ಎಂದು ವರದಿ ತಿಳಿಸಿದೆ.

ಮಧ್ಯ ದೆಹಲಿಯ ರಾಜಿಂದರ್ ನಗರ ಮತ್ತು ಪಶ್ಚಿಮ ದೆಹಲಿಯ ಪಟೇಲ್ ನಗರ ಮತ್ತು ರಂಜೀತ್ ನಗರ ಪ್ರದೇಶಗಳಲ್ಲಿನ ಕೋಚಿಂಗ್ ಸೆಂಟರ್ ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಓಲ್ಡ್ ರಾಜಿಂದರ್ ನಗರವೊಂದರಲ್ಲೇ, ಬಾರಾ ಬಜಾರ್ ಮಾರ್ಗದ ಸ್ಟ್ರೆಚ್‌ನಲ್ಲಿ 18 ಬೇಸ್‌ಮೆಂಟ್‌ಗಳನ್ನು ಸೀಲ್ ಮಾಡಲಾಗಿದೆ.

ಮಾಹಿತಿಯ ಪ್ರಕಾರ. ಈ ಮೂರು ಪ್ರದೇಶಗಳಲ್ಲಿ ಒಟ್ಟು 15 ಆಸ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಅವುಗಳಲ್ಲಿ ಏಳು ಓಲ್ಡ್ ರಾಜಿಂದರ್ ನಗರದಲ್ಲಿವೆ.

ಜುಲೈ 28 ರಿಂದ ಜುಲೈ 31 ರವರೆಗೆ ಸುಮಾರು 185 ಆಸ್ತಿಗಳನ್ನು ಎಂಸಿಡಿ ಸಮೀಕ್ಷೆ ನಡೆಸಿದೆ. ಕಾನೂನಿಗೆ ವಿರುದ್ಧವಾಗಿ ನೆಲಮಾಳಿಗೆಯನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸಿದ್ದಕ್ಕಾಗಿ ಸೀಲಿಂಗ್ ಕ್ರಮ ಕೈಗೊಳ್ಳಲಾಗಿದೆ ಎಂದು ಮಹಾನಗರ ಪಾಲಿಕೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ