ನನ್ನ ವಿರುದ್ಧ ಇಡಿ ದಾಳಿ ನಡೆಸಲು ಯೋಜಿಸಲಾಗಿದೆ: ರಾಹುಲ್ ಗಾಂಧಿ
ನಾನು ಇಡಿ ಅಧಿಕಾರಿಗಳನ್ನು ಕೈಬೀಸಿ ಸ್ವಾಗತಿಸಲು ಸಿದ್ಧನಾಗಿದ್ದೇನೆ ಎಂದು ರಾಹುಲ್ ಗಾಂಧಿ ಅವರು ತಮ್ಮ ಎಕ್ಸ್ ಖಾತಯಲ್ಲಿ ಪೋಸ್ಟ್ ಮಾಡಿದ್ದಾರೆ.
ನವದೆಹಲಿ: ಸಂಸತ್ತಿನಲ್ಲಿ 'ಚಕ್ರವ್ಯೂಹ'ದ ಹೇಳಿಕೆ ನೀಡಿದ ನಂತರ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ದಾಳಿ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ.
ನಾನು ಇಡಿ ಅಧಿಕಾರಿಗಳನ್ನು ಕೈಬೀಸಿ ಸ್ವಾಗತಿಸಲು ಸಿದ್ಧನಾಗಿದ್ದೇನೆ ಎಂದು ರಾಹುಲ್ ಗಾಂಧಿ ಅವರು ತಮ್ಮ ಎಕ್ಸ್ ಖಾತಯಲ್ಲಿ ಪೋಸ್ಟ್ ಮಾಡಿದ್ದಾರೆ.
“ಸ್ಪಷ್ಟವಾಗಿ ಹೇಳುತ್ತೇನೆ, ಇಬ್ಬರಲ್ಲಿ ಒಬ್ಬರಿಗೆ ನನ್ನ ಚಕ್ರವ್ಯೂಹದ ಭಾಷಣ ಇಷ್ಟವಾಗಿಲ್ಲ. ನನ್ನ ವಿರುದ್ಧ ಇಡಿ ದಾಳಿ ನಡೆಸಲು ಯೋಜಿಸಲಾಗುತ್ತಿದೆ ಎಂದು ಇಡಿ 'ಒಳಗಿನವರೇ' ನನಗೆ ಹೇಳಿದ್ದಾರೆ” ಎಂದು ರಾಹುಲ್ ಗಾಂಧಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
"ನಾನು ಚಹಾ ಮತ್ತು ಬಿಸ್ಕತ್ ಇಟ್ಟುಕೊಂಡು ತೆರೆದ ತೋಳುಗಳೊಂದಿಗೆ ಇಡಿಯನ್ನು ಸ್ವಾಗತಿಸಲು ಕಾಯುತ್ತಿದ್ದೇನೆ" ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.
ಕಳೆದ ಸೋಮವಾರ ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಕುರುಕ್ಷೇತ್ರದಲ್ಲಿ ಅಭಿಮನ್ಯುವನ್ನು ಮಣಿಸಲು ಕೌರವರು 'ಚಕ್ರವ್ಯೂಹ' ನಿರ್ಮಿಸಿದ ಹಾಗೆ ಬಿಜೆಪಿಯು ದೇಶದಲ್ಲಿ ರೈತರು ಮತ್ತು ಯುವಕರ ಸುತ್ತ 'ಚಕ್ರವ್ಯೂಹ' ನಿರ್ಮಿಸುವ ಮೂಲಕ ದೇಶದಲ್ಲಿ ಭಯದ ವಾತಾವರಣ ಸೃಷ್ಟಿಸಿದ್ದಾರೆ ಎಂದು ಟೀಕಿಸಿದ್ದರು.
ರೈತರು, ಕಾರ್ಮಿಕರು ಮಾತ್ರವಲ್ಲದೆ ಬಿಜೆಪಿಯ ಸಂಸದರು ಸಹ ಈ 'ಚಕ್ರವ್ಯೂಹ'ದಲ್ಲಿ ಸಿಲುಕಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.