ದೇಶ

ವಿಶ್ವೇಶ್ವರ ಭಟ್ ವಿರುದ್ಧ 'ದಿವ್ಯಾ ಸ್ಪಂದನಾ' ಮಾನನಷ್ಟ ಪ್ರಕರಣ: ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಕಾರ

ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕನ್ನಡ ಚಿತ್ರರಂಗದ ನಟಿಯರು ಭಾಗಿಯಾಗಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಸ್ಪಂದನಾ ಏಷ್ಯಾನೆಟ್ ನ್ಯೂಸ್ ಮತ್ತು ಇತರರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ನವದೆಹಲಿ: ಏಷ್ಯಾನೆಟ್ ನ್ಯೂಸ್ ನೆಟ್‌ವರ್ಕ್ ಮತ್ತು ಪತ್ರಕರ್ತ ವಿಶ್ವೇಶ್ವರ್ ಭಟ್ ವಿರುದ್ಧ ನಟಿ-ರಾಜಕಾರಣಿ ದಿವ್ಯಾ ಸ್ಪಂದನಾ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಕನ್ನಡ ಚಿತ್ರರಂಗದ ನಟಿಯರು ಭಾಗಿಯಾಗಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಸ್ಪಂದನಾ ಏಷ್ಯಾನೆಟ್ ನ್ಯೂಸ್ ಮತ್ತು ಇತರರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಸುದ್ದಿ ಪ್ರಸಾರ ಮಾಡುವಾಗ ನನ್ನ ಹೆಸರನ್ನು ಪದೇ ಪದೇ ಹೇಳಲಾಗಿದ್ದು, ಫೋಟೋಗಳು ಮತ್ತು ವೀಡಿಯೊಗಳನ್ನು ತೋರಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ನಿರ್ದಿಷ್ಟವಾಗಿ ಕ್ರಿಕೆಟ್ ಬೆಟ್ಟಿಂಗ್ ಅಥವಾ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗಳಲ್ಲಿ ನಾನು ಒಬ್ಬರು ಎಂಬಂತೆ ಸುದ್ದಿಯನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಸ್ಪಂದನಾ ಸಲ್ಲಿಸಿರುವ ದೂರಿನಲ್ಲಿ ಸ್ಪಷ್ಪಪಡಿಸಲಾಗಿದೆ.

ವಿಚಾರಣೆ ರದ್ದುಗೊಳಿಸಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ತ್ರಿಸದಸ್ಯ ಪೀಠ ನಿರಾಕರಿಸಿತು.

ದಿವ್ಯಾ ಸ್ಪಂದನಾ ಅವರ ಹೆಸರನ್ನು ಪದೇ ಪದೇ ಬುಲೆಟಿನ್‌ನಲ್ಲಿ ಉಲ್ಲೇಖಿಸಲಾಗಿದೆ, ಆದೇಶವನ್ನು ಹೇಗೆ ರದ್ದುಗೊಳಿಸಬಹುದು? ಎಂದು ಪ್ರಶ್ನಿಸಿದ ನ್ಯಾಯಪೀಠ, ನಾವು ಇದನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಹೇಳಿತು.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಏಷ್ಯಾನೆಟ್ ನ್ಯೂ ನೆಟ್‌ವರ್ಕ್ ಮತ್ತು ಇತರರು ಸಲ್ಲಿಸಿದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಕ್ರಿಕೆಟ್ ಬೆಟ್ಟಿಂಗ್ ಅಥವಾ ಸ್ಪಾಟ್ ಫಿಕ್ಸಿಂಗ್‌ನಲ್ಲಿ ಯಾವುದೇ ರೀತಿಯಲ್ಲಿ ಭಾಗಿಯಾಗಿರುವ ಅಥವಾ ಸಂಪರ್ಕಕ್ಕೆ ಸಂಬಂಧಿಸಿದಂತೆ ದಿವ್ಯಾ ಸ್ಪಂದನಾ ವಿರುದ್ಧ ನ್ಯಾಯಾಲಯದ ಮುಂದೆ ಯಾವುದೇ ಸಾಕ್ಷ್ಯ ತೋರಿಸುವಲ್ಲಿ ಅರ್ಜಿದಾರರು ವಿಫಲರಾಗಿರುವುದಾಗಿ ಹೈಕೋರ್ಟ್ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT