ಬಿಭವ್ ಕುಮಾರ್ 
ದೇಶ

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಬಂಧನ ಪ್ರಶ್ನಿಸಿ ಬಿಭವ್ ಕುಮಾರ್ ಸಲ್ಲಿಸಿದ್ದ ಅರ್ಜಿ ವಜಾ

ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಕುಮಾರ್ ಅವರು ಮೇ 13 ರಂದು ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ್ದರು. ಮೇ 18ರಂದು ಅವರನ್ನು ಬಂಧಿಸಲಾಗಿತ್ತು.

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಸಂಸದೆ ಸ್ವಾತಿ ಮಲಿವಾಲ್‌ ಅವರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ತನ್ನ ಬಂಧನ ಪ್ರಶ್ನಿಸಿ ಮುಖ್ಯಮಂತ್ರಿ ಆಪ್ತ ಬಿಭವ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ. ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಹೇಳಿದರು.

ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಕುಮಾರ್ ಅವರು ಮೇ 13 ರಂದು ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ್ದರು. ಮೇ 18ರಂದು ಅವರನ್ನು ಬಂಧಿಸಲಾಗಿತ್ತು. ತನ್ನ ಬಂಧನ ಕಾನೂನುಬಾಹಿರ ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 41A (ಪೊಲೀಸ್ ಅಧಿಕಾರಿಯ ಮುಂದೆ ಹಾಜರಾಗುವ ಸೂಚನೆ) ನಿಬಂಧನೆಗಳ ಸಂಪೂರ್ಣ ಉಲ್ಲಂಘನೆ ಮತ್ತು ಕಾನೂನು ಆದೇಶಕ್ಕೆ ವಿರುದ್ಧವಾಗಿದೆ ಎಂದು ಘೋಷಿಸಲು ನಿರ್ದೇಶನ ನೀಡಬೇಕೆಂದು ಕುಮಾರ್ ಅರ್ಜಿ ಸಲ್ಲಿಸಿದ್ದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿದ ದೆಹಲಿ ಪೊಲೀಸರು ತರಾತುರಿಯಲ್ಲಿ ಕುಮಾರ್ ಅವರನ್ನು ಬಂಧಿಸಿಲ್ಲ. ಕಾನೂನಿನ ಪ್ರಕಾರ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಮನವಿ ಸಲ್ಲಿಸಿದರು.

ಕುಮಾರ್ ವಿರುದ್ಧ ವಿವಿಧ ಭಾರತೀಯ ದಂಡ ಸಂಹಿತೆ (IPC) ನಿಬಂಧನೆಗಳ ಅಡಿಯಲ್ಲಿ ಮೇ 16 ರಂದು ಎಫ್ ಐಆರ್ ದಾಖಲಿಸಲಾಗಿದೆ. ಅವರ ಜಾಮೀನು ಅರ್ಜಿಯನ್ನು ಈ ಹಿಂದೆ ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್ ವಜಾಗೊಳಿಸಿತ್ತು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel