ಅಮಿತ್ ಶಾ PTI
ದೇಶ

2029ರಲ್ಲೂ ಕೇಂದ್ರದಲ್ಲಿ NDA ಸರ್ಕಾರ ರಚನೆಯಾಗಲಿದೆ: ಅಮಿತ್ ಶಾ ಭವಿಷ್ಯ!

ಚಂಡೀಗಢದ ಮಣಿಮಜ್ರಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 'ಪ್ರತಿಪಕ್ಷಗಳು ಏನು ಹೇಳಬೇಕೋ ಅದನ್ನು ಹೇಳುತ್ತವೆ. ಆದರೆ, ಚಿಂತಿಸಬೇಡಿ. 2029ರಲ್ಲೂ ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದರು.

ಚಂಡೀಗಢ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ. ಈ ಮೈತ್ರಿಯು ತನ್ನ ಅವಧಿಯನ್ನು ಪೂರ್ಣಗೊಳಿಸುವುದು ಮಾತ್ರವಲ್ಲದೆ 2029 ರಲ್ಲೂ ಸರ್ಕಾರ ರಚಿಸುತ್ತದೆ ಎಂದು ಹೇಳಿದರು.

ಚಂಡೀಗಢದ ಮಣಿಮಜ್ರಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, 'ಪ್ರತಿಪಕ್ಷಗಳು ಏನು ಹೇಳಬೇಕೋ ಅದನ್ನು ಹೇಳುತ್ತವೆ. ಆದರೆ, ಚಿಂತಿಸಬೇಡಿ. 2029ರಲ್ಲೂ ಎನ್‌ಡಿಎ ಅಧಿಕಾರಕ್ಕೆ ಬರಲಿದ್ದು ಮೋದಿಯೂ ಬರುತ್ತಾರೆ ಎಂದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಒಂದಷ್ಟು ಯಶಸ್ಸು ಸಾಧಿಸಿದ್ದೇವೆ ಎಂದು ಪ್ರತಿಪಕ್ಷಗಳು ಭಾವಿಸುತ್ತಿವೆ ಎಂದು ಅಮಿತ್ ಶಾ ಹೇಳಿದರು. ಕಳೆದ ಮೂರು ಚುನಾವಣೆಯಲ್ಲಿ ಕಾಂಗ್ರೆಸ್ ಪಡೆದಿದ್ದಕ್ಕಿಂತ ಹೆಚ್ಚು ಸ್ಥಾನಗಳನ್ನು ಈ ಬಾರಿ ಬಿಜೆಪಿ ಗೆದ್ದಿರುವುದು ತಮಗೆ ಗೊತ್ತಿಲ್ಲ ಎಂದರು. ಎನ್‌ಡಿಎಯ ಏಕೈಕ ಘಟಕವಾದ ಬಿಜೆಪಿಯು ಅವರ ಸಂಪೂರ್ಣ ಮೈತ್ರಿಗಿಂತ ಹೆಚ್ಚಿನ ಸ್ಥಾನಗಳನ್ನು ಹೊಂದಿದೆ. 'ಅನಿಶ್ಚಿತತೆಯ ವಾತಾವರಣ ಸೃಷ್ಟಿಸಲು ಮುಂದಾಗಿರುವ ವಿಪಕ್ಷಗಳು ಈ ಸರ್ಕಾರ ಕೆಲಸ ಮಾಡುವುದಿಲ್ಲ ಎಂದು ಪದೇ ಪದೇ ಹೇಳುತ್ತಿದ್ದಾರೆ' ಎಂದರು.

'ಈ ಸರ್ಕಾರವು ತನ್ನ 5 ವರ್ಷಗಳ ಅವಧಿಯನ್ನು ಪೂರ್ಣಗೊಳಿಸುವುದು ಮಾತ್ರವಲ್ಲದೆ ಮುಂದಿನ ಅವಧಿಯೂ ಈ ಸರ್ಕಾರವೇ ಆಗಿರುತ್ತದೆ ಎಂದು ನಾನು ವಿರೋಧ ಪಕ್ಷದ ಸ್ನೇಹಿತರಿಗೆ ಭರವಸೆ ನೀಡಲು ಬಯಸುತ್ತೇನೆ. ವಿರೋಧ ಪಕ್ಷದಲ್ಲಿ ಕುಳಿತು ಪರಿಣಾಮಕಾರಿಯಾಗಿ ಕೆಲಸ ಮಾಡುವುದನ್ನು ಕಲಿಯಲು ಸಿದ್ಧರಾಗಿ ಎಂದು ಚಂಡೀಗಢದ ಮಣಿಮಜ್ರಾದಲ್ಲಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ, ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಕಾಂಗ್ರೆಸ್, ಚಾಮುಂಡಿ ಬೆಟ್ಟವನ್ನು 'ಟೂಲ್‌ಕಿಟ್' ಆಗಿ ಬಳಸುತ್ತಿದೆ: ಆರ್ ಅಶೋಕ್

ಉಡುಪಿ: ನಾಪತ್ತೆಯಾಗಿದ್ದ ಬೆಂಗಳೂರು ಮಹಿಳೆಯ ಶವ ಸೌಪರ್ಣಿಕಾ ನದಿಯಲ್ಲಿ ಪತ್ತೆ!

'HAL ನಿರ್ಮಿತ ತೇಜಸ್ ಮಾರ್ಕ್-1ಎ ಫೈಟರ್ ಜೆಟ್‌ ಗಳು ಹಸ್ತಾಂತರಕ್ಕೆ ಸಿದ್ಧ': ರಕ್ಷಣಾ ಕಾರ್ಯದರ್ಶಿ

SCROLL FOR NEXT